ಶಾಲಾ ಮಕ್ಕಳಿಗೆ ಹಾಲಿನ ಪುಡಿ ಬದಲಿಗೆ ಟೆಟ್ರಾಪ್ಯಾಕ್ ಹಾಲು

Social Share

ಬೆಂಗಳೂರು,ನ.24- ಇನ್ಮುಂದೆ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರುವ ಕೆನೆಭರಿತ ಹಾಲಿನ ಪುಡಿ ಬದಲಿಗೆ ಟೆಟ್ರಾ ಪ್ಯಾಕ್‍ನಲ್ಲಿರುವ ಹಾಲು ವಿತರಿಸಲು ಕೆಎಂಎಫ್ ತೀರ್ಮಾನಿಸಿದೆ. ಈ ಕುರಿತಂತೆ ಕೆಎಂಎಫ್ ಈಗಾಗಲೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆ ಜಾರಿಗೆ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆಯಲ್ಲಿ ಹಾಲಿನ ಪೌಡರ್ ವಿತರಿಸುವಲ್ಲಿ ಸಾಲು ಸಾಲು ಲೋಪಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಡ ಮಕ್ಕಳ ಹಾಲಿನ ಪೌಡರ್‍ಗಳನ್ನು ಅಕ್ರಮ ಸಾಗಾಟ ಮಾಡುತ್ತಿರುವ ಆರೋಪಗಳು ಹೆಚ್ಚಾಗುತ್ತಿರುವ ಕಾರಣದಿಂದ ಟೆಟ್ರಾ ಪ್ಯಾಕ್ ಹಾಲು ವಿತರಿಸಲು ಮುಂಬರುವ ಬಜೆಟ್ ನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಮಾಡಿಕೊಂಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಬಜೆಟ್‍ನಲ್ಲಿ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆಗೆ ಗ್ರೀನ್ ಸಿಗ್ನಲ್ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಹಿಂದೂ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದ ಕುಕ್ಕರ್ ಕ್ರಿಮಿ ಶಾರೀಕ್

ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸುವ ಹಾಲಿನ ಪೌಡರ್ ಬಳಕೆಗೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಅದೇ ರೀತಿ ಗರ್ಭಿಣಿಯರು ಸಹ ಹಾಲಿನ ಪೌಡರ್ ಬಳಕೆಗೆ ನಿರಾಸಕ್ತಿ ತೋರುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ.

ಬೆಂಗಳೂರು ಸೇರಿ ರಾಜ್ಯದಾದ್ಯಂತ ಇನ್ನೂ 2 ದಿನ ಜಿಟಿಜಿಟಿ ಮಳೆ

ಹೀಗಾಗಿ ಹಾಲಿನ ಪೌಡರ್ ಬದಲು ಟೆಟ್ರಾ ಪ್ಯಾಕ್ ಹಾಲು ನೀಡಿದ್ರೆ ಸದ್ಭಳಕೆ ಯಾಗಬಹುದು ಎಂಬ ವಿಶ್ವಾಸದಿಂದ ಮುಂದಿನ ವರ್ಷದಿಂದ ಶಾಲಾ ಮಕ್ಕಳಿಗೆ 180 ಎಂಎಲ್ ಟೆಟ್ರಾ ಪ್ಯಾಕ್ ಹಾಲು ನೀಡಲು ತೀರ್ಮಾನಿಸಲಾಗಿದೆ.

karnataka, school, children, Tetrapak, milk, kmf,

Articles You Might Like

Share This Article