ಬೆಂಗಳೂರು,ನ.28-ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕೆಂದು ನಾವು ಬಾಯಿ ತಪ್ಪಿ ನೀಡಿದ ಹೇಳಿಕೆಯಾಗಿದ್ದು, ಇದರಿಂದ ಮುಸಲಾನ ಸಹೋದರರಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಸಲಾನರೂ ಈ ದೇಶದ ಪ್ರಜೆಗಳೇ, ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ಹೀಗಾಗಿ ಈ ವಿಷಯವನ್ನು ಬೆಳೆಸದಂತೆ ಇಲ್ಲಿಗೇ ಮುಕ್ತಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಮೂಲತಃ ಒಕ್ಕಲಿಗರು ಧರ್ಮ ಸಹಿಷ್ಣುಗಳು. ನಾವು ಎಲ್ಲಾ ಧರ್ಮದವರನ್ನು ಇಲ್ಲಿಯವರೆವಿಗೂ ಸಮಾನವಾಗಿಯೇ ಕಂಡಿರುತ್ತೇವೆ. ನಮ ಮಠಕ್ಕೆ ಮುಸ್ಲಿಂ ಜನಾಂಗದವರು ಸಂಪರ್ಕವಿಟ್ಟುಕೊಂಡು ಬಂದು ಹೋಗುತ್ತಿರುತ್ತಾರೆ. ನಾವು ಸಹ ಮುಸ್ಲಿಂ ಜನಾಂಗದ ಮದುವೆ ಹಾಗೂ ಇತರೆ ಶುಭ ಸಮಾರಂಭಗಳಲ್ಲಿ ಭಾಗಿಯಾಗಿರುತ್ತೇವೆ. ಈ ಜನಾಂಗದ ಬಗ್ಗೆ ಯಾವುದೇ ಅಸಹಿಷ್ಣುತೆ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಿಂದೆ ಆಡಳಿತಾರೂಢ ಪಕ್ಷಗಳು ವಕ್‌್ಫ ಮಂಡಳಿಗೆ ವಿಶೇಷ ಸವಲತ್ತುಗಳು ಹಾಗೂ ವಿಶೇಷ ಕಾನೂನಿನ ವ್ಯವಸ್ಥೆ ಮಾಡಿಕೊಟ್ಟಿರುವುದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗಳಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ರಚನೆಯಾಗಿದೆ. ಈ ವಿಚಾರದಲ್ಲಿ ಜೆಪಿಸಿ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಕ್ಫ್ ಮಂಡಳಿ ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರೈತಾಪಿ ಜನಗಳ ಒಕ್ಕಲೆಬ್ಬಿಸಿ ಅವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂಬುದನ್ನು ಸುದ್ದಿ ಮಾಧ್ಯಮಗಳಲ್ಲಿ ಗಮನಿಸಿದ್ದು, ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಸಂಸ್ಥೆಯ ನಡೆಯನ್ನು ನಾವು ಒಪ್ಪಲಾಗದು ಎಂದಿದ್ದಾರೆ.
ವಕ್‌್ಫ ಮಂಡಳಿ ಹೊಂದಿರುವ ಜಮೀನುಗಳು ಯಾವ ರೀತಿ ಅವರಿಗೆ ಬಂದಿವೆ ಎಂಬುದರ ನಿಖರವಾದ ಮಾಹಿತಿಯನ್ನು ಸರ್ಕಾರಕ್ಕೆ ನೀಡಿ ಆ ಜಮೀನುಗಳನ್ನು ಅವರು ಉಳಿಸಿಕೊಳ್ಳುವುದರ ಬಗ್ಗೆ ನಮಗೆ ಯಾವುದೇ ಅಭ್ಯಂತರವಿರುವುದಿಲ್ಲ. ಆದರೆ, ತಲೆತಲಾಂತರಗಳಿಂದ ಕೃಷಿ ಮಾಡುತ್ತಿರುವ ನಮ ರೈತರನ್ನು ವಕ್ಫ್ ಮಂಡಳಿಯ ಹೆಸರೇಳಿ ಜಾಗ ಖಾಲಿ ಮಾಡಿಸುವಂತಿಲ್ಲ ಎಂದು ಸ್ವಾಮೀಜಿ ಅವರು ತಿಳಿಸಿದ್ದಾರೆ.