ದೆಹಲಿಯಲ್ಲಿ ಕಣ್ಮನ ಸೆಳೆದ ಕರ್ನಾಟಕದ ನಾರಿ ಶಕ್ತಿ ಸ್ತಬ್ಧಚಿತ್ರ

Social Share

ಬೆಂಗಳೂರು,ಜ.26- ದೆಹಲಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿದ್ದ ನಾರಿ ಶಕ್ತಿ ಸ್ತಬ್ಧಚಿತ್ರ ಆಕರ್ಷಣೀಯವಾಗಿ ಜನರ ಗಮನ ಸೆಳೆಯಿತು. ಈ ಮೂಲಕ ಸತತ ಹದಿನಾಲ್ಕು ವರ್ಷಗಳಿಂದಲೂ ಸ್ತಬ್ಧಚಿತ್ರದೊಂದಿಗೆ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಂಡಿದೆ.

ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಕರ್ನಾಟಕ ಪಾಲಿಗೆ ಸ್ಮರಣೀಯವಾಗಿದೆ. ಹಲವು ಅಡೆ ತಡೆಗಳನ್ನು ಎದುರಿಸಿ, ಕೊನೆಯ ಹಂತದಲ್ಲಿ ರಾಜ್ಯವು ಪಥ ಸಂಚಲನಕ್ಕೆ ರಹದಾರಿ ಪಡೆದುಕೊಂಡಿದೆ. ಅತ್ಯಂತ ಕಡಿಮೆ ಅವಯಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸುವ ಸವಾಲನ್ನು ಯಶಸ್ವಿಯಾಗಿ ಸಾಸಿದೆ. ಕರ್ನಾಟಕದ ಹಿರಿಮೆ ಮತ್ತು ಕನ್ನಡ ಅಸ್ಮಿತೆಯ ಪ್ರತೀಕವಾದ ಸ್ತಬ್ಧಚಿತ್ರವನ್ನು 10 ದಿನಗಳಲ್ಲಿ ರೂಪುಗೊಳಿಸಲಾಗಿತ್ತು.

ಸ್ಥಬ್ದ ಚಿತ್ರವು ಕರ್ನಾಟಕದ ಮಹಿಳೆಯರ ಶೌರ್ಯ, ಕರ್ನಾಟಕದ ಹೆಮ್ಮೆಯ ರೆಷ್ಮೆ, ಪುಷ್ಪೋದ್ಯಮ, ಸಿರಿಧಾನ್ಯದ ನಾಯಕತ್ವ, ನಾರಿ ಶಕ್ತಿ ಎಂಬ ಐದು ವಿಷಯಗಳನ್ನು ಅಡಕಗೊಂಡಿದೆ. ಕರ್ನಾಟಕಕ್ಕೆ ಕೀರ್ತಿ ತಂದ ಮೂವರು ಮಹಿಳಾ ಸಾಧಕಿಯರ ಸಾಧನೆಯನ್ನು ಪ್ರದರ್ಶಿಸುವ ಪ್ರತಿಕೃತಿಗಳನ್ನು ನಿರ್ಮಿಸಿರುವುದಾಗಿ ಇಲಾಖೆಯ ಆಯುಕ್ತರಾದ ಡಾ. ಪಿ.ಎಸ್. ಹರ್ಷ ತಿಳಿಸಿದ್ದಾರೆ.

ನಾಗಾಲ್ಯಾಂಡ್‍ನಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

ಆಜÁದಿ ಕ ಅಮೃತ ಮಹೋತ್ಸವದ ಅಂಗವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆಯರಾದ ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರುಗಳ ಸಾಧನೆಗಳನ್ನು ನಾರಿ ಶಕ್ತಿ ಹೆಸರಿನಲ್ಲಿ ಪ್ರಸ್ತುತ ಪಡಿಸಲಾಗಿದೆ. ಇವರು ಸಮಾಜಕ್ಕೆ ನೀಡಿದ ನಿಸ್ವಾರ್ಥ ಕೊಡುಗೆಗಾಗಿ ಕೇಂದ್ರ ಸರ್ಕಾರದ ಪದ್ಮಶ್ರೀ ಪುರಸ್ಕಾರ ಪಡದಿದ್ದಾರೆ.

ಅಂತರರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಸ್ಥಬ್ದ ಚಿತ್ರದ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು. ಯುವ ಸಂಗೀತ ನಿರ್ದೇಶಕ ಪ್ರವೀಣ್ ಡಿ. ರಾವ್ ಅವರ ಕನ್ನಡ ಸಂಗೀತವನ್ನು ಅಳವಡಿಸಲಾಗಿದೆ. ಕಾರವಾರದ ಪುರುಷೋತ್ತಮ ಪಾಂಡುರಂಗ ಅವರ ನೇತೃತ್ವದ ಹಾಲಕ್ಕಿಯವರ ಸುಗ್ಗಿ ಕುಣಿತದ 20 ಮಂದಿಯ ಕಲಾವಿದರ ತಂಡವು ಪಥಸಂಚಲನದಲ್ಲಿ ತೊಡಗಿಸಿಕೊಂಡಿದೆ.

ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರವು ಈ ಬಾರಿ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ 2023ರ ಗಣರಾಜ್ಯೋತ್ಸದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿರಲಿಲ್ಲ. ವಾದ ವಿವಾದಗಳು ಹೆಚ್ಚಾದ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆ ರಕ್ಷಣಾ ಸಚಿವಾಲಯಕ್ಕೆ ಪತ್ರ ಬರೆದು ಮತ್ತೊಮ್ಮೆ ಅವಕಾಶಕ್ಕೆ ಮನವಿ ಮಾಡಿತ್ತು. ಇದಾದ 12 ದಿನಗಳ ಬಳಿಕ ಅನುಮತಿ ದೊರೆಯಿತು.

ಹತ್ತು ದಿನಗಳಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸಲಾಗಿದ್ದು, ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ. ಸ್ತಬ್ಥಚಿತ್ರದಲ್ಲಿ ಗಿಡ-ಮರ, ಬೆಟ್ಟ-ಗುಡ್ಡ, ಪಕ್ಷಿಗಳಿಂದ ಕಂಗೊಳಿಸುತ್ತಿರುವ ಸ್ತಬ್ಧಚಿತ್ರದ ಮುಂಭಾಗದಲ್ಲಿ ತೊಟ್ಟಿಲು ತೂಗುತ್ತಾ, ಕೈನಲ್ಲಿ ಮಗು ಆಡಿಸುತ್ತಿರುವ ಸೂಲಗಿತ್ತಿ ನರಸಮ್ಮ ಅವರನ್ನು ತೋರಿಸಲಾಗಿದೆ. ನುರಿತ ವೈದ್ಯರ ಅನುಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಹೆರಿಗೆಗಳನ್ನು ಮಾಡಿಸುವಲ್ಲಿ ಅವರು ಸಿದ್ಧಹಸ್ತರು. ಏಳು ದಶಕಗಳಲ್ಲಿ ಇಂತಹ ಎರಡು ಸಾವಿರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ.

ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತಿರಂಗಾ

ಹಚ್ಚ ಹಸುರಿನಿಂದ ಕೂಡಿರುವ ಸ್ತಬ್ಧಚಿತ್ರದ ಮಧ್ಯಭಾಗದಲ್ಲಿ ಗಿಡ ಮರಗಳನ್ನು ಪೆÇೀಷಿಸುತ್ತಿರುವ ತುಳಸಿ ಗೌಡ ಹಾಲಕ್ಕಿ ಅವರನ್ನು ತೋರಿಸಲಾಗಿದೆ. ವೃಕ್ಷ ಮಾತೆ ಎಂದೇ ಹೆಸರಾಗಿರುವ ತುಳಸಿ ಅವರು ಅಪರೂಪದ ಪ್ರಭೇದದ ಸಸ್ಯಗಳನ್ನು ಗುರುತಿಸಿ ಬೆಳೆಸುವಲ್ಲಿ ಪರಿಣತರಾಗಿದ್ದಾರೆ. 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಿರುವ ಶ್ರೇಯ ಅವರದ್ದು. ಗಿಡಗಳ ಮಧ್ಯೆ ಕುಳಿತು ಅವುಗಳನ್ನು ಪೆÇೀಷಿಸುತ್ತಿರುವ ರೀತಿಯಲ್ಲಿ ತುಳಸಿಗೌಡ ಹಾಲಕ್ಕಿ ಅವರನ್ನು ಚಿತ್ರಿಸಲಾಗಿದೆ.

ಕಣ್ಣಿಗೆ ಮುದ ನೀಡುವ ಕಾಡಿನ ನಿಜಸ್ವರೂಪದಂತಿರುವ ಸ್ತಬ್ಧಚಿತ್ರದ ಕೊನೆಯ ಭಾಗದಲ್ಲಿ ರಾಜ್ಯ ಹೆದ್ದಾರಿಯ ಆಜುಬಾಜಿನಲ್ಲಿ 8 ಸಾವಿರ ಮರಗಳನ್ನು ನೆಟ್ಟು ನೀರೆರೆದು ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರನ್ನು ತೋರಿಸಲಾಗಿದೆ. ಅವರು ಗಿಡಗಳಿಗೆ ನೀರೆರೆಯುತ್ತಿರುವಂತೆ ಬಿಂಬಿಸಲಾಗಿದೆ. ಇದಲ್ಲದೆ 75 ಆಲದ ಮರಗಳನ್ನು 4.5 ಕಿ. ಮೀ ಉದ್ದದ ರಾಜ್ಯ ಹೆದ್ದಾರಿಯಲ್ಲಿ ಬೆಳೆಸಿದ್ದಾರೆ. ಇದನ್ನು ಸ್ತಬ್ಧಚಿತ್ರದ ಕೊನೆಯ ಭಾಗದಲ್ಲಿ ಬೃಹತ್ ಆಲದ ಮರದ ಮೂಲಕ ಚಿತ್ರಿಸಲಾಗಿದೆ.

ಕಳೆದ ವರ್ಷ ವಾರ್ತಾ ಇಲಾಖೆ ಪ್ರದರ್ಶಿಸಿದ್ದ ಸ್ತಬ್ಧಚಿತ್ರಕ್ಕೆ ದ್ವಿತೀಯ ಪ್ರಶಸ್ತಿ ದೊರೆತಿತ್ತು. ಸಾಂಪ್ರದಾಯಿಕ ಕಸೂತಿ ತೊಟ್ಟಿಲಿನ ಸ್ಥಬ್ಧ ಚಿತ್ರವನ್ನು 2022ರಲ್ಲಿ ರೂಪಿಸಲಾಗಿತ್ತು. 2015ರಲ್ಲಿ ಚನ್ನಪಟ್ಟದ ಗೊಂಬೆಗಳನ್ನು ಪ್ರದರ್ಶಿಸಿತ್ತು, ಇದಕ್ಕೆ ತೃತೀಯ ಪ್ರಶಸ್ತಿ ದೊರೆತಿತ್ತು. 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಯ ಸ್ತಬ್ಧಚಿತ್ರಕ್ಕೆ ತೃತೀಯ ಪ್ರಶಸ್ತಿ, 2011ರಲ್ಲಿ ಬೀದರಿನ ಪಾರಂಪರಿಕ ಕಲೆಯಾದ ಬಿದರಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು.

ಗಣರಾಜ್ಯೋತ್ಸವಕ್ಕೆ ಗೈರಾದ ತೆಲಂಗಾಣ ಸಿಎಂ

2005ರಲ್ಲಿ ಕರ್ನಾಟಕದಲ್ಲಿನ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ ಪ್ರಶಸ್ತಿ ಪಡೆದುಕೊಂಡಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.

Articles You Might Like

Share This Article