ಪಟ್ಟು ಬಿಡದ ಸಾರಿಗೆ ನೌಕರರು : ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ

Social Share

ಬೆಂಗಳೂರು, ಮಾ.17- ರಾಜ್ಯ ಸರ್ಕಾರ ಸಾರಿಗೆ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ.15ರಷ್ಟು ವೇತನವನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದ್ದರೂ ಮುಷ್ಕರವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಇದೇ 21ರಿಂದ ಜಂಟಿ ಕ್ರಿಯಾ ಸಮಿತಿ ಕರ್ತವ್ಯಕ್ಕೆ ಹಾಜರಾಗಿ ಎಲ್ಲ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಎಚ್ಚರಿಸಿದೆ.

ಈ ಹಿನ್ನೆಲೆಯಲ್ಲಿ ಇದೇ 20ರಂದು ಸಾರಿಗೆ ಇಲಾಖೆ ಆಯುಕ್ತರು ಮುಷ್ಕರ ನಿರತ ನೌಕರರೊಂದಿಗೆ ಸಂಧಾನ ಸಭೆ ನಡೆಸಲು ಮುಂದಾಗಿದ್ದಾರೆ. ಯುಗಾದಿ ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಕುಟುಂಬ ಸಮೇತ ಸ್ವಗ್ರಾಮಗಳಿಗೆ ತೆರಳುತ್ತಾರೆ. ಈ ವೇಳೆ ಬಸ್ ಇಲ್ಲದಿದ್ದರೆ ಸರ್ಕಾರಕ್ಕೆ ಹಿಡಿಶಾಪ ಹಾಕುವುದು ಗ್ಯಾರಂಟಿ ಎಂಬ ಹಿನ್ನೆಲೆಯಲ್ಲಿ ಸಂಧಾನ ಸಭೆ ಕರೆಯಲಾಗಿದೆ.

ಈ ಕುರಿತು ಸಾರಿಗೆ ಇಲಾಖೆ ಆಯುಕ್ತರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವ್ಯವಸ್ಥಾಪಕ ನಿರ್ದೇಶಕರಾದ ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಎನ್‍ಡಬ್ಲ್ಯೂಕೆಆರ್‍ಟಿಸಿ ಮತ್ತು ಕೆಕೆಆರ್‍ಟಿಸಿಯವರು ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸದಿಲ್ಲದ ಕಾರಣ 24ರಂದು ಮುಷ್ಕರ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಚುನಾವಣಾ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ RSS ಮತ್ತಷ್ಟು ಸಕ್ರಿಯ

ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಈ ಕುರಿತು ಇದೇ 8ರಂದು ಮುಷ್ಕರ ನೋಟಿಸ್ ನೀಡಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕರು ಪತ್ರದಲ್ಲಿ ಕೋರಿದ್ದಾರೆ ಎಂದು ಆಯುಕ್ತರು ಪ್ರಸ್ತಾಪಿಸಿದ್ದಾರೆ.

ಕಾರ್ಮಿಕ ಸಂಘದವರು ಮುಷ್ಕರ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಆಡಳಿತ ವರ್ಗ ಮತ್ತು ಕಾರ್ಮಿಕ ಸಂಘದವರ ನಡವೆ ವಿವಾದ ಉದ್ಭವಿಸಿದೆ ಎಂದು ಪರಿಗಣಿಸಿ, ಈ ಸಂಬಂಧ ಮಧ್ಯೆ ಪ್ರವೇಶಿಸುವುದು ಅವಶ್ಯವೆಂದು ಭಾವಿಸಿ 20ರಂದು ಮಧ್ಯಾಹ್ನ 2.30ಕ್ಕೆ ರಾಜೀ ಸಂಧಾನ ಸಭೆ ನಿಗದಿಪಡಿಸಿದೆ. ಸದರಿ ಸಂಧಾನ ಸಭೆಗೆ ಆಡಳಿತವರ್ಗ ಮತ್ತು ಕಾರ್ಮಿಕ ಸಂಘದವರು ಹಾಜರಿರಬೇಕೆಂದು ಈ ಮೂಲಕ ಸೂಚಿಸಿದೆ ಎಂದು ತಿಳಿಸಲಾಗಿದೆ.

ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ, ನೌಕರರ ಜಂಟಿ ಕ್ರಿಯಾ ಸಮಿತಿ ಎರಡೂ ಬಣಗಳು ಪ್ರತ್ಯೇಕವಾಗಿ ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.

ಮುಷ್ಕರಕ್ಕೆ ಕರೆ ನೀಡಿರುವ ನೌಕರರ ಜೊತೆ ಸಾರಿಗೆ ಸಚಿವರು ನಡೆಸಿದ ಸಭೆ ಈಗಾಗಲೇ ವಿಫಲವಾಗಿದೆ. ಶೇ.20ರಷ್ಟು ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತಾಗಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನಾಯಕರ ಮುನಿಸು ಶಮನ, ಒಗ್ಗಟ್ಟಿನ ಜಪ

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೇ.15ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಪ್ರಕಟಿಸಿದ್ದಾರೆ. ಆದರೆ, ಸಾರಿಗೆ ನೌಕರರ ಸಂಘದವರು ಇದನ್ನು ಒಪ್ಪುತ್ತಿಲ್ಲ. 2020ರಿಂದ ವೇತನ ಪರಿಷ್ಕರಣೆ ಆಗಿಯೇ ಇಲ್ಲ. ಈಗ ಶೇ.15ರಷ್ಟು ಹೆಚ್ಚಳ ಮಾಡಿದರೆ ಪ್ರಯೋಜನವಿಲ್ಲ. ವಿದ್ಯುತ್ ಕಂಪನಿ ನೌಕರರಿಗೆ ಶೇ.20ರಷ್ಟು ಹೆಚ್ಚಳ ಮಾಡಿದ್ದಾರೆ. ನಮಗೇಕೆ ಕಡಿಮೆ ಸಂಬಳ ಎಂದು ಪ್ರಶ್ನಿಸಿ ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬರಾವ್ ಮಾತನಾಡಿ, ಮಾರ್ಚ್ 21ರಂದು ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದೇವೆ. ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ಮುಂದುವರಿಯಲಿದೆ. ಇದು ನೌಕರರ ಹೋರಾಟ, ಈ ಮೂಲಕ ಜನರಿಗೆ ತೊಂದರೆ ಮಾಡುವ ಉದ್ದೇಶವಿಲ್ಲ. ನೌಕರರ ವೇತನ ಹೆಚ್ಚಳದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಸದ್ಯಕ್ಕೆ ನಾವು ಮುಷ್ಕರದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‍ನಲ್ಲಿ ಮತ್ತೆ ಶುರುವಾಯ್ತು ಬಣ ಬಡಿದಾಟ

2020ರಲ್ಲಿ ಸುಮಾರು 5 ದಿನಗಳ ಕಾಲ ಸಾರಿಗೆ ನಿಗಮಗಳ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿದ್ದರು. ಬಸ್ ಸಂಚಾರ ಸ್ಥಗಿತವಾಗಿ ಜನರು ಪರದಾಟ ನಡೆಸುವಂತಾಗಿತ್ತು. ಆಗ ಹಲವು ನೌಕರರು ವಜಾಗೊಂಡು ತೊಂದರೆ ಅನುಭವಿಸುವಂತಾಯಿತು. ನೂರಕ್ಕೂ ಹೆಚ್ಚು ಮಂದಿ ಈಗಲೂ ಸಹ ಕೆಲಸಕ್ಕೆ ಮರಳಲು ಸಾಧ್ಯವಾಗಿಲ್ಲ. ಈಗ ಮತ್ತೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ವಜಾಗೊಂಡರೆ ಮುಂದೇನು ಎಂಬ ಚಿಂತೆ ನೌಕರರನ್ನು ಕಾಡುತ್ತಿದೆ.

Karnataka, transport, workers, strike,

Articles You Might Like

Share This Article