ಬೆಂಗಳೂರು,ಮಾ.14- ತಾಪಮಾನ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಚದುರಿದಂತೆ ಕೆಲವೆಡೆ ಇನ್ನೊಂದು ವಾರ ಬೇಸಿಗೆ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಯುಗಾದಿ ಹಬ್ಬದವರೆಗೂ ಮಳೆಯಾಗುವ ಮುನ್ಸೂಚನೆಗಳು ಕಂಡುಬಂದಿವೆ.
ರಾಜ್ಯದಲ್ಲಿ 5 ಮಿ.ಮೀನಿಂದ 15 ಮಿ.ಮೀವರೆಗೆ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
ಮಾ.16ರಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಅಂದರೆ ಮಾ.21, 22ರವರೆಗೂ ಮಳೆಯಾಗುವ ಸಾಧ್ಯತೆಗಳಿವೆ.
ಆದರೆ ಆಗ್ನೇಯ ಭಾಗದ ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಇನ್ನೆರಡು ವಾರ ಮಳೆಯಾಗುವ ಮುನ್ಸೂಚನೆಗಳಿವೆ. ಒಟ್ಟಾರೆ ಈ ಭಾಗದಲ್ಲಿ 30 ಮಿ.ಮೀವರೆಗೂ ಮಳೆ ನಿರೀಕ್ಷಿಸಬಹುದಾಗಿದೆ.
ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲ್ಮನಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಉಳಿದಂತೆ ರಾಜ್ಯದ ಒಳನಾಡಿನಲ್ಲಿ 5ರಿಂದ 10 ಮಿ.ಮೀನಷ್ಟು ಮಾತ್ರ ಮಳೆಯಾಗಬಹುದು. ವಾತಾವರಣದಲ್ಲಿ ತಾಪಮಾನ ಹೆಚ್ಚಾಗಿ ವಾಯುಭಾರದಲ್ಲಿ ಏರುಪೇರಾಗುವುದರಿಂದ ಮುಂಗಾರು ಪೂರ್ವ ಮಳೆಯಾಗುವುದು ಸಹಜ ಪ್ರಕ್ರಿಯೆ ಎಂದು ಅವರು ತಿಳಿಸಿದರು.
Karnataka, week, summer, rain, expected,