ಬೆಂಗಳೂರು ಫೆ 25 .ತೀವ್ರ ಕುತೂಹಲ ಕೆರಳಿಸಿದ್ದ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಕಳೆದ 2 ವಾರದಿಂದ ಸುಧೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿದಾರರ ಹಾಗೂ ಸರ್ಕಾರಿ ವಕೀಲರ ವಾದವನ್ನು ಆಲಿಸಿ ಹಿಂದೆ ತಮ್ಮ ಎಲ್ಲಾ ಹೇಳಿಕೆಗಳನ್ನು ಲಿಖಿತ ಮೂಲಕ ದಾಖಲಿಸಿ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರ ಪೂರ್ಣ ಪೀಠವು ಇಂದು ವಾದಿ ಹಾಗೂ ಪ್ರತಿವಾದಿಗಳಿಗೆ ಲಿಖಿತ ವಾದವನ್ನು ಸಲ್ಲಿಸುವಂತೆ ತಿಳಿಸಿದ್ದು ತೀರ್ಪನ್ನು ಕಾಯ್ದಿರಿಸಿದೆ.
