ಭೂಕುಸಿತದಿಂದ ಮನೆಗೆ ಅಪ್ಪಳಿಸಿದ ಬಂಡೆಕಲ್ಲು

Social Share

ಜಮ್ಮು, ನ.4 – ಭೂ ಕುಸಿತದಿಂದ ದೊಡ್ಡ ಬಂಡೆಯೊಂದು ಮನೆಗೆ ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

ಬಫ್ಲಿಯಾಜನ್‍ಡೂನರ್ ಪ್ರದೇಶದಲ್ಲಿ ಬೆಳಿಗ್ಗೆ 5.50 ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯ 48 ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರು ಸ್ಥಳೀಯರೊಂದಿಗೆ ತಕ್ಷಣ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಇದು ಘನಘೋರ : ಸಕಾಲದಲ್ಲಿ ಚಿಕಿತ್ಸೆ ಸಿಗದೇ ತಾಯಿ ಮತ್ತು ಅವಳಿ ನವಜಾತ ಶಿಶುಗಳ ಸಾವು

ಗಾಯಾಳುಗಳನ್ನು ಸುರನಕೋಟೆಯ ಉಪ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಪ್ರದೇಶದ ಕೆಲ ಮನೆಗಳನ್ನು ಖಾಲಿ ಮಾಡಿಸಿ ನಾಗರೀಕರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

Articles You Might Like

Share This Article