Friday, October 11, 2024
Homeರಾಷ್ಟ್ರೀಯ | NationalBIG NEWS ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷೀಯರ ಆಗ್ರಹ

BIG NEWS ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷೀಯರ ಆಗ್ರಹ

ಬೆಂಗಳೂರು, ಸೆ.26- ಸದ್ಯದಲ್ಲಿ ನಡೆಯುತ್ತಿರುವ ಹರಿಯಾಣ, ಜಮು ಕಾಶೀರ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಾತ್ಕಾಲಿಕವಾಗಿ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಚಾರಣೆ ಎದುರಿಸಬೇಕೆಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದ್ದಾರೆ.

ಈ ಹೇಳಿಕೆಯ ಮೂಲಕ ಇತ್ತೀಚಿನ ಬೆಳವಣಿಗೆ ನಂತರ ಕಾಂಗ್ರೆಸ್‌‍ ಪಕ್ಷದಲ್ಲಿ ಮೊಟ್ಟಮೊದಲ ಬಾರಿಗೆ ಸ್ವಪಕ್ಷೀಯರಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಕೆ.ಬಿ.ಕೋಳಿವಾಡ ಧ್ವನಿ ಎತ್ತಿದ್ದಂತಾಗಿದೆ. ಮುಡಾ ಪ್ರಕರಣದಲ್ಲಿ ಕಾಂಗ್ರೆಸ್‌‍ ಪಕ್ಷದ ಹೈಕಮಾಂಡ್‌, ಸಚಿವರು, ಶಾಸಕರಾದಿಯಾಗಿ ಎಲ್ಲರೂ ಸಿದ್ದರಾಮಯ್ಯ ಅವರ ಪರವಾಗಿ ಬೆಂಬಲ ವ್ಯಕ್ತಪಡಿಸಿದ್ದು, ಕೆ.ಬಿ.ಕೋಳಿವಾರ ಅಪಸ್ವರ ಹೊಸ ಬೆಳವಣಿಗೆಗಳಿಗೆ ನಾಂದಿಹಾಡಿದೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಬಿ. ಕೋಳಿವಾಡ ಅವರು 40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಕಪ್ಪುಚುಕ್ಕಿ ಇಲ್ಲದ್ದಂತೆ ಕಳಂಕರಹಿತವಾಗಿ ನಡೆದುಕೊಂಡಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಬಡವರ ಪರವಾಗಿ ಆಡಳಿತ ನಡೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಸೇರಿದಂತೆ ಎಲ್ಲರ ಹಾಗೂ 136 ಶಾಸಕರ ಸಂಪೂರ್ಣ ಬೆಂಬಲವಿದೆ. ಅವರು ನಿರ್ದೋಷಿ ಎಂಬುದರಲ್ಲಿ ಎರಡು ಮಾತಿಲ್ಲ. ಜೆಡಿಎಸ್‌‍, ಬಿಜೆಪಿಯವರ ರಾಜಕೀಯ ಪಿತೂರಿಯಿಂದಾಗಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿಗಳಿಂದ ದೂರು ಕೊಡಿಸಿದ್ದಾರೆ.

ಆ ಪ್ರಕರಣ ರಾಜ್ಯಪಾಲರು, ಅಲ್ಲಿಂದ ನ್ಯಾಯಾಲಯದವರೆಗೂ ತಲುಪಿದೆ. ಇದೆಲ್ಲವೂ ಕಣ್ಣುದುರಿಗೆ ಇದೆ. ಈಗ ಹರಿಯಾಣ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ಅವರ ಪ್ರಕರಣವನ್ನೇ ಬಹು ಮುಖ್ಯವಾಗಿ ಪ್ರಸ್ತಾಪಿಸಿದ್ದಾರೆ. ಇದರಿಂದ ಕಾಂಗ್ರೆಸ್‌‍ಗೆ ಮುಜುಗರವಾಗಿದೆ ಎಂದು ಹೇಳಿದರು. ಸದ್ಯದ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ ಪಕ್ಷಕ್ಕೆ ಆಗುತ್ತಿರುವ ಮುಜುಗರವನ್ನು ತಪ್ಪಿಸಬೇಕು. ವಿಚಾರಣೆ ನಡೆದ ಬಳಿಕ ಅವರು ನಿರ್ದೋಷಿಯಾಗಿ ಹೊರಬರುತ್ತಾರೆಂಬ ವಿಶ್ವಾಸ ತಮಗಿದೆ. ಹಾಗೂ ವಿಧಾನಸಭೆಗಳ ಚುನಾವಣೆಗಳ ಬಳಿಕ ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಯಾಗಬೇಕೆಂದು ಕೋಳಿವಾಡ ಪ್ರತಿಪಾದಿಸಿದರು.

ಸಿದ್ದರಾಮಯ್ಯ ಅವರು ಹಿಂದುಳಿದ, ದಲಿತ ಹಾಗೂ ಎಲ್ಲಾ ವರ್ಗಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥ ಆಡಳಿತ ನಡೆಸಲು ಸೂಕ್ತವ್ಯಕ್ತಿ. ನನ್ನ 50 ವರ್ಷಗಳ ರಾಜಕೀಯ ಅನುಭವದಲ್ಲಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌‍ನಲ್ಲಿ ಮುಖ್ಯಮಂತ್ರಿ ಆಗಬೇಕೆಂಬ ನಿಲುವನ್ನು ಹೊಂದಿದ್ದೇನೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಜೀನಾಮೆ ನೀಡುವುದು ಸೂಕ್ತ ಎಂದರು.

RELATED ARTICLES

Latest News