Wednesday, October 16, 2024
Homeರಾಜ್ಯಇಂದಿನಿಂದ ಕೆಸಿಇಟಿ ಪರೀಕ್ಷೆಗೆ ಆನ್‍ಲೈನ್ ಸಲ್ಲಿಕೆಗೆ ಅವಕಾಶ

ಇಂದಿನಿಂದ ಕೆಸಿಇಟಿ ಪರೀಕ್ಷೆಗೆ ಆನ್‍ಲೈನ್ ಸಲ್ಲಿಕೆಗೆ ಅವಕಾಶ

ಬೆಂಗಳೂರು,ಜ.10- ವೃತ್ತಿಪರ ಕೋರ್ಸುಗಳಿಗೆ ಸೇರುವ ಅರ್ಹತೆ ಪಡೆಯಲು ಅಭ್ಯರ್ಥಿಗಳು ಕೆಸಿಇಟಿ-24 ಪರೀಕ್ಷೆಗೆ ಇಂದಿನಿಂದಲೇ ಫೆಬ್ರುವರಿ 10 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಕಾಧಿರವು (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ-24) ನಡೆಸುವ ದಿನಾಂಕವನ್ನು ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಏಪ್ರಿಲ್ 18 ಮತ್ತು 19 ರಂದು ಪರೀಕ್ಷೆಗಳು ನಡೆಯಲಿವೆ. ಈ ಮುಂಚೆ ಏಪ್ರಿಲ್ 20 ಮತ್ತು 21 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು.

ಈ ಸಂಬಂಧ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್ 21ರಂದು ಎನ್‍ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅದರಂತೆ, ಕೆಸಿಇಟಿ ಕನ್ನಡ ಪರೀಕ್ಷೆ ಏಪ್ರಿಲ್ 20 ರಂದು ನಡೆಯಲಿದೆ.

ಮೆಡಿಕಲ್ / ಡೆಂಟಲ್ / ಆಯುಷ್ / ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತï ಸೈನ್ಸ್ ಕೋರ್ಸುಗಳಿಗೆ ಸೇರಲು ಆಸಕ್ತಿ ಇರುವ ಅಭ್ಯರ್ಥಿಗಳೂ ಈಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಯುಜಿನೀಟ್-2024 ಫಲಿತಾಂಶಗಳ ಪ್ರಕಟಣೆಯ ನಂತರ ಕೆಇಎ ನಲ್ಲಿ ನೋಂದಾಯಿಸಲಾಗಿರುವ ಅಭ್ಯರ್ಥಿಗಳಿಗೆ ನೀಟ್ ಸ್ಕೋರ್ ಮತ್ತು ರೋಲ್ ನಂಬರ್ ದಾಖಲಿಸಲು ಇಂಟರ್‍ಫೇಸ್ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸಿಇಟಿ ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ಭಾಗವಾಗಿ ಈ ಬಾರಿ ಅರ್ಜಿಯನ್ನು ಅರ್ಜಿ ಹಾಗೂ ಪರಿಶೀಲನೆ ನಮೂನೆಯಲ್ಲಿ ಹೊರತರಲಾಗಿದೆ. ಇದರಿಂದಾಗಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸಲು ಈ ಮುಂಚೆ ಹಿಡಿಯುತ್ತಿದ್ದ ಹೆಚ್ಚಿನ ಸಮಯ ಉಳಿತಾಯವಾಗುತ್ತದೆ ಎಂದು ವಿವರಿಸಲಾಗಿದೆ.

ಟಿವಿ ನೇರ ಸಂದರ್ಶನದಲ್ಲಿ ಪ್ರತ್ಯಕ್ಷರಾದ ಬಂದೂಕುದಾರಿಗಳ ಬಂಧನ

ಹೊಸ ಮಾದರಿಯಲ್ಲಿ, ಅಭ್ಯರ್ಥಿಗಳ ವಿವರಗಳನ್ನು ಅಂದರೆ, ಶಾಲೆಗಳ ವ್ಯಾಸಂಗ, ಕನ್ನಡ ಮಾಧ್ಯಮ, ಜಾತಿ, ಆದಾಯ ಮುಂತಾದ ವಿವರಗಳನ್ನು ಸ್ಯಾಟ್ಸ್ ಹಾಗೂ ಕಂದಾಯ ಇಲಾಖೆಯ ವೆಬ್ ಸರ್ವೀಸ್ ಮುಖಾಂತರ ಆನ್ಲೈನ್ ಮೂಲಕವೇ ಪರಿಶೀಲಿಸಲಾಗುವುದು, ಅಭ್ಯರ್ಥಿಗಳು ಪ್ರತ್ಯೇಕವಾಗಿ ದಾಖಲೆಗಳ ಪರಿಶೀಲನೆಗೆ ಭೌತಿಕವಾಗಿ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಪ್ರತಿ ವರ್ಷವೂ ಸುಮಾರು ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ ಪರಿಶೀಲನೆಗಳ ಕಾರ್ಯಗಳು ಈಗ ಅರ್ಜಿ ಸಲ್ಲಿಸುವ ಸಮಯದಲ್ಲಿಯೇ ನಡೆಯಲಿವೆ ಎಂದು ತಿಳಿಸಲಾಗಿದೆ.

ಹೀಗಾಗಿ, ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಎಚ್ಚರಿಕೆಯಿಂದ ಭರ್ತಿ ಮಾಡಲು ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಸೂಚಿಸಲಾಗಿದೆ. ಪ್ರಾಕಾರವು ಸುಮಾರು 250 ಕ್ಕೂ ಹೆಚ್ಚು ನುರಿತ ಉಪನ್ಯಾಸಕರುಗಳನ್ನು ಮಾಸ್ಟರ್ ಟ್ರೈನರ್ ಎಂದು ಗುರುತಿಸಿ ಅವರುಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ತರಬೇತಿಯನ್ನು ಈಗಾಗಲೇ ನೀಡಿದೆ. ಈ ಮಾಸ್ಟರ್ ಟ್ರೈನರ್‍ಗಳು, ಪ್ರತಿ ವಿಜ್ಞಾನ ಕಾಲೇಜಿನಲ್ಲಿ ಒಂದಿಬ್ಬರು ಉಪನ್ಯಾಸಕರನ್ನು ಗುರುತಿಸಿ ಅವರಿಗೆ ಕಾಲೇಜು ಟ್ರೈನರ್‍ತರಬೇತಿ ನೀಡಿ ಸಜ್ಜುಗೊಳಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಬಗ್ಗೆ ಸಂದೇಹಗಳಿದ್ದಲ್ಲಿ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿನ ಕಾಲೇಜು ಟ್ರೈನರ್ ಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆಯಬೇಕು ಎಂದೂ ಸೂಚಿಸಲಾಗಿದೆ.

ಮೊಬೈಲ್ ಆ್ಯಪ್ ಅಭಿವೃದ್ಧಿ:
ಇದರ ಜೊತೆಗೆ, ಸುಧಾರಣೆಯ ಮತ್ತೊಂದು ಕ್ರಮವಾಗಿ ಕೆಇಎ ಮೊಬೈಲ್ ಆಪ್ ಅಭಿವೃದ್ಧಿ ಪಡಿಸಿದ್ದು ಇದನ್ನು ಕೆಇಎ ವೆಬ್‍ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಇದರಿಂದಾಗಿ, ಪರೀಕ್ಷಾ ವೇಳಾಪಟ್ಟಿ, ಸೂಚನೆ, ಅರ್ಜಿ ಪ್ರಕ್ರಿಯೆಯ ಯಾವ ಹಂತದಲ್ಲಿದೆ ಇತ್ಯಾದಿ ಮಾಹಿತಿಯನ್ನು ವಾಟ್ಸಾಪ್ ಮೆಸೇಜ್ ಮೂಲಕವೇ ಪಡೆಯಬಹುದು. ಇದು, ಅಭ್ಯರ್ಥಿಗಳು ಪದೇಪದೇ ವೆಬ್‍ಸೈಟ್ ಗೆ ಹೋಗಿ ಪರಿಶೀಲಿಸಬೇಕಾದ ಅಗತ್ಯವನ್ನು ತಪ್ಪಿಸುತ್ತದೆ. ಶುಲ್ಕ ಪಾವತಿ ಹಾಗೂ ಅರ್ಜಿಗೆ ಸಂಬಂಸಿದ ವಿವರಗಳು ಅಭ್ಯರ್ಥಿಗಳ ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ.

RELATED ARTICLES

Latest News