ಬೆಂಗಳೂರು,ಆ.4- ವಿದ್ಯಾರ್ಥಿಗಳು ಮತ್ತು ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ ಕೆಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಕಾರ ಮುಂದೂಡಿದೆ. ಕೆಸಿಇಟಿ ಅಂಕಗಳು ಮತ್ತು ಶ್ರೇಯಾಂಕಗಳಲ್ಲಿ ಪುನರಾವರ್ತಿತರಿಗೆ 2021ರ ಪಿಯು ಅಂಕಗಳನ್ನು ಸೇರಿಸದ ಪ್ರಾಧಿಕಾರದ ನಿರ್ಧಾರಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳುವ ಭರವೆ ನೀಡಿರುವುದರಿಂದ ಸದ್ಯಕ್ಕೆ ಘೋಷಣೆಯಾಗಿರುವ ಕೆಇಎ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, 3 ಲಕ್ಷ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24,000 ವಿದ್ಯಾರ್ಥಿಗಳ ಪಿಯುಸಿ ಅಂಕಗಳನ್ನು ಪರಿಗಣಿಸದಿರಲು ಕೆಇಎ ನಿರ್ಧರಿಸಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತಿಳಿಸಲಾಗಿದೆ ಎಂದಿದ್ದಾರೆ.
ಇದರ ಹೊರತಾಗಿಯೂ, ನಾಳೆ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ದಿಷ್ಟಾವ ಉಪವಾಸವನ್ನು ಪ್ರಾರಂಭಿಸುವುದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡದ ಕಾರಣ ಮತ್ತು ಈ ಹಿಂದೆ ಪ್ರಾಧಿಕಾರದಿಂದ ಯಾವುದೇ ಘೋಷಣೆ ಮಾಡದ ಕಾರಣ ಈ ನಿರ್ಧಾರ ಅಭೂತಪೂರ್ವವಾಗಿದೆ ಎಂದು ಅವರು ಹೇಳಿದ್ದಾರೆ.