ಕಾಂಗ್ರೆಸ್ ಸೋಲಿಸಲು ಕೆಸಿಆರ್ ಫಂಡಿಂಗ್‍ : ಪ್ರತಿಕ್ರಿಯಿಸಲು ಡಿಕೆಶಿ ನಕಾರ

Social Share

ಬೆಂಗಳೂರು,ಜ.21- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ 500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಡೆಯಲು ಟಿಆರ್‍ಎಸ್ ನಾಯಕ ಹಾಗೂ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರರಾವ್ ಅವರು ಹಣ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಣ್ಣ ಕೊಟ್ಟಿರುವವರು ಹಾಗೂ ತೆಗೆದುಕೊಂಡವರನ್ನು ಕೇಳಿ. ಬೇರೆಯವರು ವೈಯಕ್ತಿಕ ವಿಚಾರಕ್ಕಾಗಿ ಚಂದ್ರಶೇಖರ್‍ರಾವ್‍ರನ್ನು ಭೇಟಿ ಮಾಡಿರಬಹುದು, ಅದನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ನಾಯಕರು ಸಭೆ ಮಾಡಿದರೆ ಚಪ್ಪಲಿಗಳು ಕೈಗೆ ಬರುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ನಮ್ಮ ಹಳ್ಳಿ ಕಡೆ ಇಂತಹವರಿಗೆ ಬಚ್ಚಲು ಬಾಯಿ ಅಂತಾರೆ ಎಂದು ಕಿಡಿಕಾರಿದರು.
ಕಟೀಲ್ ಒಂದು ಪಕ್ಷದ ರಾಜ್ಯಾಧ್ಯಕ್ಷರು, ಸಂಸದರು. ಅವರು ಮಾತನಾಡಿದರೆ ಅದಕ್ಕೆ ಸಾಕ್ಷಿ ಇರಬೇಕು.

ಇದುವರೆಗೂ ಅವರು ಮಾತನಾಡಿರುವ ಯಾವುದೇ ವಿಷಯಕ್ಕೆ ಸಾಕ್ಷಿ ಏನಾದರೂ ಇದೆಯೇ ಎಂದು ಪ್ರಶ್ನಿಸಿದರು.
ಕಟೀಲ್ ಅವರು ಮೊದಲು ಯತ್ನಾಳ್, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಅವರ ಮಾತಿಗೆ ಉತ್ತರ ನೀಡಲಿ. ಕಟೀಲ್ ಅವರಿಗೆ ಸ್ವಂತ ಪಕ್ಷದ ಮೇಲೆ ಹಿಡಿತವಿಲ್ಲ. ಕಾಂಗ್ರೆಸ್ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನೆ. ಇಲ್ಲದಿದ್ದರೆ ನನ್ನಂತಹವರ ಪ್ರತಿಕ್ರಿಯೆ ಪಡೆಯಲು ಅವರು ಯೋಗ್ಯರಲ್ಲ ಎಂದು ತಳ್ಳಿ ಹಾಕಿದರು.

ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ತಲೆದಂಡ

ಮೊದಲ ಹಂತದ ಟಿಕೆಟ್ ಪಟ್ಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಫೆ.2 ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈಗಾಗಲೇ ನಮ್ಮ ನಾಯಕರು ಆಕಾಂಕ್ಷಿಗಳ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಾವು ನಮ್ಮ ಪ್ರವಾಸ ಮುಗಿಸಿ ಚರ್ಚೆ ಮಾಡಿ ಆದಷ್ಟು ಬೇಗ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‍ನಿಂದ ಬಿಜೆಪಿಗೂ ನಾಯಕರು ಬರುವವರಿದ್ದಾರೆ ಎಂದು ಮುಖ್ಯಮಂತ್ರಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತಡಮಾಡದೆ ಆದಷ್ಟು ಬೇಗ ಕರೆದುಕೊಳ್ಳಲಿ ಎಂದು ತಿರುಗೇಟು ನೀಡಿದರು.
ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತತ್ವದಲ್ಲಿ ರಾಜ್ಯ ಚುನಾವಣೆ ಎದುರಿಸಲಾಗುವುದು ಎಂದಿದ್ದರರು. ಈಗ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದಿದ್ದಾರೆ. ಆ ಮೂಲಕ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದರು.

ನಾವು ಜನರ ಭಾವನೆ ಅರಿತು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕೆಲ ಘೋಷಣೆಗಳನ್ನು ಮಾಡಿದ್ದೇವೆ. ಅದಾದ ನಂತರ ಬಿಜೆಪಿಯವರು ನಾವು ಕೂಡ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.

ಕುಸ್ತಿ ಫೆಡರೇಷನ್‍ಗೆ ಉಸ್ತುವಾರಿ ಸಮಿತಿ ರಚನೆ : 3 ದಿನಗಳ ಧರಣಿ ಅಂತ್ಯ

ಕಳೆದ ಮೂರೂವರೆ ವರ್ಷಗಳಿಂದ ಅಕಾರದಲ್ಲಿ ಇದ್ದರೂ ಯಾಕೆ ಗೃಹಜ್ಯೋತಿ ಮತ್ತು ಗೃಹ ಲಕ್ಷ್ಮೀಯಂತ ಯೋಜನೆಗಳನ್ನು ಜಾರಿಗೆ ತರಲಿಲ್ಲ? ನಾವು ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದ್ದೇವೆ.

ಎರಡನೇ ಗ್ಯಾರೆಂಟಿ ಯೋಜನೆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಮಹಿಳೆಯರಿಗೆ ನೆರವಾಗಲು ಮನೆಯೊಡತಿಗೆ ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದೇವೆ. ಈ ಯೋಜನೆ ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲವರು ಈ ಸೌಲಭ್ಯ ಬೇಡ ಎಂದರೆ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು.

KCR, funding, Karnataka, Congress, KPCC president, DK Shivakumar,

Articles You Might Like

Share This Article