Thursday, December 7, 2023
Homeರಾಜ್ಯಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಯಾದಗಿರಿ/ಕಲಬುರಗಿ,ಅ.29-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯನ್ನು ಚುರುಕುಗೊಳಿಸಿರುವ ರಾಜ್ಯ ಪೊಲೀಸರು ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ವಶಕ್ಕೆ ಪಡೆದಿದ್ದಾರೆ.

ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯಲ್ಲಿ 5 ಪ್ರಕರಣಗಳನ್ನು ದಾಖಲಾಗಿದ್ದು, 9 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ, ವಿಚಾರಣೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ತಿಳಿಸಿದ್ದಾರೆ.

ನಗರದ ನ್ಯೂ ಕನ್ನಡ ಪಿಯು ಕಾಲೇಜ್, ಸಬಾ ಪಿಯು ಕಾಲೇಜ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್, ಎಲ್‍ಕೆಇಟಿ ಬಾಲಕೀಯರ ಪಿಯು ಕಾಲೇಜ್ ಹಾಗೂ ಮಹಾತ್ಮಗಾಂ ಪಿಯು ಕಾಲೇಜ್‍ಗಳಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಬ್ಲೂಟೂತ್ ಬಳಸಿರುವುದು ದೃಢಪಟ್ಟಿದೆ, ಈದೇ ಪ್ರಕರಣದಲ್ಲಿ ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನಲ್ಲಿ 1 ಪ್ರಕರಣ ದಾಖಲಾಗಿದ್ದು, ಅಲ್ಲಿ 5 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗೆ ಬಲೆ ಬೀಸಲಾಗಿದೆ.

ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಕಲಬುರಗಿ ನಗರ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲಾಗಿದ್ದು, 5 ಜನರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಈ ಸಂಜೆಗೆ ತಿಳಿಸಿದ್ದಾರೆ. ಶನಿವಾರ ನಡೆದ ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾಡಳಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪರಿಶೀಲನೆ ಮಾಡುವ ಮೆಟಲ್ ಡಿಟೆಕ್ಟರ್ ಬಳಕೆ ಮಾಡಲಿಲ್ಲ, ಪರಿಣಾಮ ಅಕ್ರಮಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಅಕ್ರಮದ ಪ್ರಮುಖ ಆರೋಪಿ ಪುಟ್ಟು ಎಂದು ಹೇಳಲಾಗುತ್ತಿದ್ದು, ಈತನ ಜೊತೆ ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಸೊನ್ನ ಗ್ರಾಮದ ಒಬ್ಬ ಸಾಥ್ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಬ್ಲೂಟೂತ್ ಉಪಕರಣ ಬಳಕೆ, 9 ಜನ ಬಂಧನ:
ಈ ಹಿಂದೆ ರಾಜ್ಯದಲ್ಲಿ ನಡೆದ 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಮೊದಲು ಬೆಳಕಿಗೆ ಬಂದಿದ್ದೇ ಕಲಬುರಗಿಯಲ್ಲಿ. ಈ ಪ್ರಕರಣ ಮಾಸುವ ಮುನ್ನವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಎಫ್‍ಡಿಎ ಹುದ್ದೆಗಳಿಗಾಗಿ ಶನಿವಾರ ನಡೆದ ಪ್ರವೇಶ ಪರೀಕ್ಷೆಯಲ್ಲಿ 3 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅತ್ಯಾಧುನಿಕ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ 22 ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News