ಮೋರ್ಬಿ ದುರ್ಘಟನೆ : ಅರವಿಂದ್ ಕೇಜ್ರಿವಾಲ್ ರೋಡ್ ಶೋ ರದ್ದು

Social Share

ಚಂಡಿಗಡ್, ಅ.31- ಗುಜರಾತ್‍ನ ಮೋಬಿನಲ್ಲಿ ನಡೆದ ತೂಗು ಸೇತುವೆ ದುರಂತದಿಂದಾಗಿ ಹರ್ಯಾಣದ ಅದಂಪುರ್‍ನಲ್ಲಿ ನಡೆಯಬೇಕಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರೋಡ್ ಶೋ ರದ್ದುಗೊಂಡಿದೆ.

ಅದಂಪುರ್‍ನಲ್ಲಿ ನಡೆಯಲಿರುವ ಉಪಚುನಾವಣೆ ಸಲುವಾಗಿ ವಿವಿಧ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ನವೆಂಬರ್ 3ಕ್ಕೆ ಉಪಚುನಾವಣೆ ನಡೆಯಲಿದ್ದು, ಮೊನ್ನಾ ದಿನ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಸೋಮವಾರ ರೋಡ್ ಶೋ ಹಮ್ಮಿಕೊಂಡಿದ್ದರು. ಭಾನುವಾರ ಮೋರ್ಬಿಯಲ್ಲಿ ತೂಗು ಸೇತುವೆ ಕುಸಿದು 132ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ರೋಡ್ ಶೋ ರದ್ದು ಮಾಡಿದ್ದಾರೆ ಎಂದು ಹರ್ಯಾಣದ ಉಸ್ತುವಾರಿ ನಾಯಕ ರಾಜ್ಯಸಭಾ ಸದಸ್ಯ ಸುಶೀಲ್ ಗುಪ್ತಾ ತಿಳಿಸಿದ್ದಾರೆ.

ಗುಜರಾತ್‍ನ ಮೊರ್ಬಿ ಸೇತುವೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆ

ಹರ್ಯಾಣದ ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಪುತ್ರ ಕುಲದೀಪ್ ಬಿಶೋಣಿ ಅವರು ಶಾಸಕ ಸ್ಥಾನಕ್ಕೆ ಆಗಸ್ಟ್‍ನಲ್ಲಿ ರಾಜೀನಾಮೆ ನೀಡಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇದರಿಂದಾಗಿ ಅದಂಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.

ಪಂಜಾಬ್‍ನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇತ್ತೀಚೆಗೆ ಈ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು. ಕೇಜ್ರಿವಾಲ್ ಕಳೆದ ವಾರ ಹಿಸ್ಸಾರ್‍ನಲ್ಲಿ ಭಾರತವನ್ನು ನಂಬರ್ ಒನ್ ಸ್ಥಾನಕ್ಕೇರಿಸೋಣ ಅಭಿಯಾನಕ್ಕೆ ಚಾಲನೆ ನೀಡಿದರು. ನಿನ್ನೆ ಸುಶೀಲ್ ಗುಪ್ತ ಕ್ಷೇತ್ರದ ಬ್ಲಾಸಮಂಡ್ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪಕ್ಷದ ಅಭ್ಯರ್ಥಿ ಸತೇಂದ್ರ ಸಿಂಗ್ ಪರವಾಗಿ ಪ್ರಚಾರ ನಡೆಸಿದ್ದರು.

ಬೆಂಗಳೂರಲ್ಲಿ ದುಪ್ಪಟಾಯ್ತು ಡೆಂಘೀ ಪೀಡಿತರ ಸಂಖ್ಯೆ

ಗುಜರಾತ್ ವಿಧಾನಸಭೆಗೂ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೋರ್ಬಿ ಘಟನೆಯ ಬಗ್ಗೆ ರಾಜಕೀಯ ಪಕ್ಷಗಳು ಅತ್ಯಂತ ಸೂಕ್ಷ್ಮವಾಗಿ ವರ್ತಿಸುತ್ತಿವೆ.

Articles You Might Like

Share This Article