ಸಂಸತ್ ಆವರಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಎಚ್‍ಡಿಡಿ ಪತ್ರ

Social Share

ಬೆಂಗಳೂರು,ನ.7- ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಸ್ಥಾಪಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ದೇವನಹಳ್ಳಿಯ ನಾಡಪ್ರಭು ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳ್ಳುತ್ತಿರುವ ಸಂದರ್ಭದಲ್ಲಿ ಬೆಂಗಳೂರು ಸಂಸ್ಥಾಪಕ ಕೆಂಪೇಗೌಡರ ಕೇಂದ್ರ ಸಮಿತಿಯು ಸಂಸತ್‍ಭವನದ ಆವರಣದಲ್ಲಿ ಕೆಂಪೇಗೌಡರ ಪ್ರತಿ ಸ್ಥಾಪಿಸಬೇಕೆಂದು ಮನವಿ ಮಾಡಿದೆ. ಸಮಿತಿಯ ಮನವಿ ಪತ್ರವನ್ನು ಲಗತ್ತಿಸಿ ಗೌಡರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಕೆಂಪೇಗೌಡರು 16ನೇ ಶತಮಾನದಲ್ಲಿ ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಇಂದು ವಿಶ್ವ ಮನ್ನಣೆ ಗಳಿಸಿದೆ. ಅಂದು ಅವರು ಬಿತ್ತಿದ ಬೀಜಗಳು ಹೆಮ್ಮರವಾಗಿ ಬೆಳೆದಿದ್ದು, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತವಾಗಿವೆ ಎಂದು ಪತ್ರದಲ್ಲಿ ಅವರು ಹೇಳಿದ್ದಾರೆ.

BIG NEWS : ಆರ್ಥಿಕ ದುರ್ಬಲರಿಗೆ ಶೇ.10ರಷ್ಟು ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್

ತಂತ್ರಜ್ಞಾನ ವಲಯದ ಪ್ರಮುಖ ಕ್ಷೇತ್ರವಾಗಿ ಬೆಂಗಳೂರು ಪ್ರಸಿದ್ಧವಾಗಲು ಕೆಂಪೇಗೌಡರು ನಗರ ನಿರ್ಮಾಣ ಸಂದರ್ಭದಲ್ಲಿ ಕೈಗೊಂಡಿದ್ದ ಕ್ರಮಗಳು ಕಾರಣವಾಗಿವೆ. ದೇಶದ ಯಾವುದೇ ನಗರದಲ್ಲಿ ಇಲ್ಲದಷ್ಟು ಸರ್ಕಾರಿ ಹಾಗೂ ಖಾಸಗಿ ವಲಯದ ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಚಳಿಗಾಲದ ಅಲರ್ಜಿಯಿಂದ ಪಾರಾಗಬೇಕಾದರೆ ಈ 6 ಆಹಾರ ಸೇವಿಸಿ

Articles You Might Like

Share This Article