ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಂಗಲ್ ಹನುಮಂತಯ್ಯ ಪ್ರತಿಮೆ ನಿರ್ಮಾಣ

Social Share

ಬೆಂಗಳೂರು,ಫೆ.10-ಮೈಸೂರು- ಬೆಂಗಳೂರು ರಸ್ತೆ ಮಾರ್ಗದ ಪ್ರಮುಖ ಸದ್ಥಳಲ್ಲಿ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೆಂಗಲ್ ಹನುಮಂತಯ್ಯನವರ 115ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇತಿಹಾಸ ಪುಟದಲ್ಲಿ ಕೆಂಗಲ್ ಹನುಮಂತಯ್ಯ ಅವರ ಹೆಸರನ್ನು ಶಾಶ್ವತವಾಗಿ ಇಡಲು ರಾಜ್ಯ ಸರ್ಕಾರ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಪ್ರತಿಮೆ ನಿರ್ಮಾಣ ಮಾಡಲು ತೀರ್ಮಾನಿಸಿದೆ ಎಂದು ತಿಳಿಸಿದರು.

ಕರ್ನಾಟಕ ಏಕೀಕರಣವಾಗಲು ಕೆಂಗಲ್ ಹನುಮಂತಯ್ಯನವರ ಪರಿಶ್ರಮ ಸಾಕಷ್ಟಿದೆ. ಇಷ್ಟು ಸುಂದರವಾದ ವಿಧಾನಸೌಧ ತಲೆಎತ್ತಲು ಅವರೇ ಕಾರಣೀಭೂತರು. ಅವರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಶಂಸಿಸಿದರು.

ವಿಮಾನದಲ್ಲಿ ದೋಷ, 13 ಗಂಟೆ ನಿಲ್ದಾಣದಲ್ಲೇ ಕಾಲ ಕಳೆದ 170 ಪ್ರಯಾಣಿಕರು

ಮೈಸೂರು ಪ್ರಜಾಪ್ರತಿನಿಧಿಯಿಂದ ಮುಖ್ಯಮಂತ್ರಿಯಾಗಿದ್ದ ಕೆಂಗಲ್ ಹನುಮಂತಯ್ಯಅವರು ಅನೇಕ ಸುಧಾರಣೆನ್ನು ಜಾರಿಗೆ ತಂದಿದ್ದರು. ಹೀಗಾಗಿ ಸರ್ಕಾರ ಅವರ ಹೆಸರನ್ನು ಶಾಶ್ವತವಾಗಿ ಉಳಿಯುವಂತ ಕೆಲಸ ಮಾಡಲಿದೆ ಎಂದು ಸಿಎಂ ಹೇಳಿದರು.

ಕೆಂಗಲ್ ಹನುಮಂತಯ್ಯ ಅವರ ಕುರಿತ ಗ್ರಂಥ ಇದೇ ವರ್ಷ ಬಿಡುಗಡೆ: ಪ್ರತಿ ಕನ್ನಡಿಗನಿಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಬದುಕು, ಹೋರಾಟದ ಬಗ್ಗೆ ಪರಿಚಯಿಸುವ ಗ್ರಂಥವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಕರ್ನಾಟಕದ 2 ನೇ ಮುಖ್ಯಮಂತ್ರಿ , ೀಮಂತ ನಾಯಕ, ಕೇಂದ್ರ ರೈಲ್ವೆ ಸಚಿವ, ಕರ್ನಾಟಕದ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕೆಂಗಲ್ ಹನುಮಂತಯ್ಯನವರಿಗೆ ಇಂದು ಅವರ ಜನ್ಮದಿನದಂದು ಗೌರವಾರ್ಪಣೆ ಮಾಡಿದ್ದೇವೆ.

ಅವರ ಜೀವನ ಚರಿತ್ರೆಯನ್ನು ಒಗ್ಗೂಡಿಸಿ ಅಕೃತ ಗ್ರಂಥ ಸಿದ್ಧಪಡಿಸಿ ಈ ವರ್ಷ ಬಿಡುಗಡೆ ಮಾಡಲಾಗುವುದು. ಈಗಾಗಲೇ ರಾಮನಗರದಲ್ಲಿ ಕೆಂಗಲ್ ಹನುಮಂತ ಯ್ಯನವರ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಆದಷ್ಟು ಶೀಘ್ರ ಪ್ರತಿಮೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಂಜಾಬ್‍ನ ಗಡಿಯಲ್ಲಿ ಚೀನಾ ಮೇಡ್ ಶಸ್ತ್ರಾಸ್ತ್ರ, ಡ್ರಗ್ಸ್ ಎಸೆದ ಪಾಕ್ ಡ್ರೋನ್

ಕರ್ನಾಟಕದ ಅಭಿವೃದ್ಧಿಗೆ ಭದ್ರಬುನಾದಿ: ಕರ್ನಾಟಕ ರಾಜ್ಯ ಸ್ಥಾಪನೆಯಾಗಲು, ಕನ್ನಡ ಮಾತನಾಡುವ ಎಲ್ಲಾ ಜನರನ್ನು ಒಗ್ಗೂಡಿಸಿದ ಪ್ರಮುಖರಲ್ಲಿ ಕೆಂಗಲ್ ಹನುಮಂತಯ್ಯ ಅವರು ಅಗ್ರಗಣ್ಯರು.

ಮೈಸೂರಿನ ಪ್ರಜಾ ಪ್ರತಿನಿಧಿ ಸಭೆಯಿಂದ ಹಿಡಿದು ವಿಧಾನಸಭಾ ಸದಸ್ಯರು,ಲೋಕಸಭಾ ಸದಸ್ಯರಾಗಿ, ಕರ್ನಾಟಕದ ಪ್ರಾರಂಭಿಕ ರಾಜಕಾರಣದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ ೀಮಂತ ನಾಯಕರು. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ನೀಡಿ, ಕರ್ನಾಟಕದ ಅಭಿವೃದ್ಧಿಗೆ ಭದ್ರಬುನಾದಿಯನ್ನು ಹಾಕಿದವರು ಎಂದರು. ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

kengal hanumanthaiah, statue, Bangalore-Mysore, highway,

Articles You Might Like

Share This Article