ಕೊಚ್ಚಿ, ಅ30 (ಪಿಟಿಐ) – ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ನಡೆದ ಸೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಎರ್ನಾಕುಲಂ ಜಿಲ್ಲೆಯ ಮಲಯತ್ತೂರಿನ 12 ವರ್ಷದ ಲಿಬಿನಾ ಎಂದು ಗುರುತಿಸಲಾಗಿದೆ.
ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಇಂದು ಮುಂಜಾನೆ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ವೈದ್ಯಕೀಯ ಮಂಡಳಿಯು ಹೊರಡಿಸಿದ ಹೇಳಿಕೆಯಲ್ಲಿ, ಬಾಲಕಿಯ ದೇಹದ ಶೇಕಡಾ 95 ರಷ್ಟು ತೀವ್ರ ಸುಟ್ಟಗಾಯಗಳೊಂದಿಗೆ ಭಾನುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಬೆಂಬಲವನ್ನು ಪಡೆದಿದ್ದರೂ, ಆಕೆಯ ಸ್ಥಿತಿಯು ಕ್ಷೀಣಿಸುತ್ತಲೇ ಇದ್ದು, ಇಂದು ಮುಂಜಾನೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಬುಲೆಟ್ ಬೈಕ್-ಸ್ಕೂಟರ್ ಡಿಕ್ಕಿ : ಬಿಎಸ್‍ಎಫ್ ಯೋಧ ಸೇರಿ ಇಬ್ಬರು ಸಾವು
ಕಲಮಸ್ಸೆರಿಯ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್‍ನಲ್ಲಿ ನಡೆದ ಬಹು ಸ್ಪೋಟಗಳಲ್ಲಿ 50 ಕ್ಕೂ ಹೆಚ್ಚು ವ್ಯಕ್ತಿಗಳು ಗಾಯಗೊಂಡಿದ್ದರು ಅದರಲ್ಲೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದರು.
ಘಟನೆಯ ಕೆಲವು ಗಂಟೆಗಳ ನಂತರ, ರಾಜ್ಯದ ತ್ರಿಶೂರ್ ಜಿಲ್ಲೆಯಲ್ಲಿ ತಾನು ಯೆಹೋವನ ಸಾಕ್ಷಿಗಳ ಸದಸ್ಯ ಎಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರು ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.