ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಯುವಕನಿಗೆ 7 ವರ್ಷ ಜೈಲು ಶಿಕ್ಷೆ

Social Share

ಇಡುಕ್ಕಿ (ಕೇರಳ), ಆ. 26-ಪೋಷಕರು ಇಲ್ಲದಿದ್ದಾಗ ಅಪ್ರಾಪ್ತ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ 25 ವರ್ಷದ ಯುವಕನಿಗೆ ಕೇರಳ ಫಾಸ್ಟ್ ಟ್ರ್ಯಾಕ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇಡುಕ್ಕಿ ತ್ವರಿತ ನ್ಯಾಯಾಲಯದ ನ್ಯಾಯಾೀಧಿಶ ಟಿ ಜಿ ವರ್ಗೀಸ್ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಕ್ಕಾಗಿ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ ,15,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್ ಎಸ್ ಸನೀಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಕಳೆದ ಎಪ್ರಿಲ್ 2016 ರಲ್ಲಿ ಸಲಕರಣೆ ಆಪರೇಟರ್ ಆಗಿದ್ದ ವ್ಯಕ್ತಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಇಲ್ಲಿಗೆ ಬಂದಿದ್ದಾಗ ಈ ಘಟನೆ ನಡೆದಿತ್ತು.

Articles You Might Like

Share This Article