Thursday, December 12, 2024
Homeರಾಷ್ಟ್ರೀಯ | Nationalಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದವನ ವಿರುದ್ಧ ಎಫ್‍ಐಆರ್

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದವನ ವಿರುದ್ಧ ಎಫ್‍ಐಆರ್

ತಿರುವನಂತಪುರಂ,ಏ.14- ಲೋಕಸಭೆ ಚುನಾವಣೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರಮೋದಿಯವರ ವರ್ಚಸ್ಸಿಗೆ ಕಳಂಕ ತರುವ ಪೋಸ್ಟ್ ಗಳನ್ನು ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕೇರಳ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಆರೋಪಿ ನಬೀಲ್ ನಾಸರ್ ಇತ್ತೀಚೆಗೆ ಫೇಸ್‍ಬುಕ್ ಹ್ಯಾಂಡಲ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳ ಕುರಿತು ಸ್ಥಳೀಯ ಬಿಜೆಪಿ ಕಾರ್ಯಕರ್ತ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಪಾಲೊಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ಮೋದಿಯವರ ವರ್ಚಸ್ಸಿಗೆ ಕಳಂಕ ತರುವ ಉದ್ದೇಶದಿಂದ ಮೋದಿ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿದ್ದರು.

ಮಾರ್ಚ್ 20ರಿಂದ ಹಲವು ದಿನಗಳ ಕಾಲ ಅದೇ ಹ್ಯಾಂಡಲ್‍ನಿಂದ ಅವರು ಇಂತಹ ಆಕ್ಷೇಪಾರ್ಹ ಸರಣಿ ಪೋಸ್ಟ್ ಗಳನ್ನು ಹಾಕುತ್ತಿದ್ದರು ಮತ್ತು ಅವು ರಾಜಕೀಯ ಪಕ್ಷದ ಕಾರ್ಯಕರ್ತರಲ್ಲಿ ಉದ್ವಿಗ್ನತೆ ಉಂಟುಮಾಡುತ್ತವೆ ಎಂದು ಎಫ್‍ಐಆರ್‍ನಲ್ಲಿ ಹೇಳಲಾಗಿದೆ.

ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆಗಳನ್ನು ನೀಡಿರುವುದಕ್ಕೆ ನಬೀಲ್ ನಾಸರ್ ವಿರುದ್ಧ ಕೇರಳ ಪೊಲೀಸ್ ಕಾಯಿದೆಯ ಐಪಿಸಿ ಸೆಕ್ಷನ್ 153 ಮತ್ತು 171 ಜಿ ಮತ್ತು 120 (ಒ)ರಡಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES

Latest News