Friday, November 22, 2024
Homeರಾಷ್ಟ್ರೀಯ | Nationalಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ, ರಾತ್ರಿ ಪ್ರಯಾಣ ನಿಷೇಧ

ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ, ರಾತ್ರಿ ಪ್ರಯಾಣ ನಿಷೇಧ

ತಿರುವನಂತಪುರಂ, ಮೇ 19– ಕೇರಳದ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವುದರಿಂದ ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದು, ತಿರುವನಂತಪುರಂ, ಕೊಲ್ಲಂ, ಅಲಪ್ಪುಳ ಮತ್ತು ಎರ್ನಾಕುಲಂ ಸೇರಿದಂತೆ ಇತರ ನಾಲ್ಕು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುತ್ತಿದ್ದು ಗಂಟೆಗೆ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಸ್ತುತ ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಪ್ರಯಾಣವನ್ನು ನಿಷೇಧಿಸಿ ಇಡುಕ್ಕಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ತಹಸೀಲ್ದಾರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಎರ್ನಾಕುಲಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ತಿರುವನಂತಪುರಂನ ದಕ್ಷಿಣ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದ್ದಿದ್ದು ,ನಗರ ಮತ್ತು ಅದರ ಉಪನಗರಗಳಲ್ಲಿ ಜಲಾವೃತವಾಗಿದೆ, ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರಿದೆ. ಕೆಲವೆಡೆ ಮನೆ, ಅಂಗಡಿಗಳು ಜಲಾವೃತಗೊಂಡಿದೆ .

ಕೆಲವು ಪ್ರದೇಶಗಳಲ್ಲಿ, ರಾಜಧಾನಿ ಮತ್ತು ಅದರ ಉಪನಗರಗಳನ್ನು ನೀರಿನ ಕಾಲುವೆಗಳು ಉಕ್ಕಿ ಹರಿಯುತ್ತವೆ.ಮುಂಗಾರು ಪೂರ್ವದಲ್ಲಿ ಕಾಲುವೆಗಳ ಸ್ವಚ್ಛತೆ ಹಾಗೂ ಒಳಚರಂಡಿ ವ್ಯವಸ್ಥೆ ಮಾಡದಿರುವುದು ರಾಜಧಾನಿ ಹಾಗೂ ಉಪನಗರಗಳಲ್ಲಿ ಜಲಾವೃತವಾಗಲು ಕಾರಣ ಎಂದು ಸಂತ್ರಸ್ತ ಜನರು ಆರೋಪಿಸಿದ್ದಾರೆ.

RELATED ARTICLES

Latest News