Thursday, December 12, 2024
Homeರಾಷ್ಟ್ರೀಯ | Nationalಕೇರಳದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿ

ಕೇರಳದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿ

ತಿರುವನಂತಪುರಂ, ಡಿ 19 (ಪಿಟಿಐ) ಕೇರಳದಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಇಲ್ಲಿ ಮತ್ತೆ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 292 ಹೊಸ ಕೋವಿಡ್ -19 ಸೋಂಕುಗಳು ಮತ್ತು ಮೂರು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.

ಇಂದು ಬೆಳಗ್ಗೆ 8 ಗಂಟೆಯವರೆಗೆ ದೇಶಾದ್ಯಂತ ವರದಿಯಾದ 341 ಕೋವಿಡ್ ಸೋಂಕುಗಳಲ್ಲಿ 292 ಕೇರಳದಿಂದ ಬಂದಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,041 ಕ್ಕೆ ತಲುಪಿದೆ ಎಂದು ಸಚಿವಾಲಯದ ವೆಬ್‍ಸೈಟ್ ತಿಳಿಸಿದೆ.

ರೋಟರ್‍ಡ್ಯಾಮ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅಪರ್ಣಾ ಸೇನ್ ಸಾಕ್ಷ್ಯಚಿತ್ರ ಆಯ್ಕೆ

ಈ ಹಿಂದೆ ನಾಲ್ಕು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು ಇದರೊಂದಿಗೆ ಕೇರಳದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದು ಇತರ ರಾಜ್ಯಗಳಿಗೂ ಎಚ್ಚರಿಕೆ ಗಂಟೆಯಾಗಿದ್ದು ಕೇರಳದ ಗಡಿ ಹೊಂದಿಕೊಂಡಿರುವ ರಾಜ್ಯಗಳು ಭಾರಿ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಅದರಲ್ಲೂ ಕರ್ನಾಟಕಕ್ಕೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ ಗಡಿ ಭಾಗದಲ್ಲಿ ಭಾರಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

RELATED ARTICLES

Latest News