ತಿರುವನಂತಪುರಂ, ಜು.14 – ವಿದೇಶದಿಂದ ಕೇರಳದ ತಿರುವನಂತಪುರಂಗೆ ಮರಳಿದ ವ್ಯಕ್ತಿಯೊಬ್ಬರಿಗೆ ಮಂಕಿ ಪಾಕ್ಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಸೋಂಕು ಲಕ್ಷಣದ ವ್ಯಕ್ತಿಯಿಂದ ರಕ್ತ ಹಾಗು ಇತರೆ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ ಪರೀಕ್ಷೆಯ ವರದಿ ಬಂದ ನಂತರವಷ್ಟೇ ರೋಗ ದೃಢಪಟ್ಟಿದೆ ಎಂದು ಹೇಳಿದರು.
ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸದ ಅವರು ವಿದೇಶದಿಂದ ಬಂದ ವ್ಯಕ್ತಿಯು ಮಂಗನ ಕಾಯಿಲೆಯ ಲಕ್ಷಣಗಳು ಕಂಡುಬಂತು ಮತ್ತು ಅತ ವಿದೇಶದಲ್ಲಿ ಮಂಕಿಪಾಕ್ಸ್ ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದನು ಎಂದು ತಿಳಿದುಬಂದಿದೆ.
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೋಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ) ಆಗಿದ್ದು, ಸಿಡುಬು ರೋಗಿಗಳಲ್ಲಿ ಹಿಂದೆ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ, ಆದರೂ ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರವಾಗಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.ಆದರೆ ಕೇರಳದಲ್ಲಿ ಮತ್ತೆ ಮಂಕಿ ಪಾಕ್ಸ್ ಆತಂಕ ಶುರುವಾಗಿದೆ