ಓಮ್ನಿ ಕಾರಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

Social Share

ಬೆಂಗಳೂರು, ಜ.20- ಓಮ್ನಿ ವಾಹನದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಬಾಣಸವಾಡಿ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿ 30 ಲಕ್ಷ ರೂ. ಬೆಲೆಬಾಳುವ ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕೇರಳದ ಪನಯಾಂಪದಂ ನಿವಾಸಿ ಅನಂತು (29) ಮತ್ತು ನಂದೀಪುಲಂನ ಬಾಬು (40) ಬಂಧಿತರು. ಇತ್ತೀಚಿನ ದಿನಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಿಗಳಾಗುತ್ತಿರುವ ಬಗ್ಗೆ ಹಾಗೂ ಸಮಾಜದ ಶಾಂತಿ ಮತ್ತು ನೆಮ್ಮದಿ ಹಾಳಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಬಾಣಸವಾಡಿ ಠಾಣೆ ಪೊಲೀಸರು ಗಾಂಜಾ ಮಾರಾಟ ಪ್ರಕರಣದ ತನಿಖೆ ಕೈಗೊಂಡು ಇಬ್ಬರನ್ನು ಬಂಸಿ 30 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್‍ನಲ್ಲಿ 2 ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಇಲ್ಲ: ಡಿಕೆಶಿ

ಎಚ್‍ಆರ್‍ಬಿಆರ್ ಲೇಔಟ್, 1ನೆ ಬ್ಲಾಕ್, 8ನೆ ಮುಖ್ಯರಸ್ತೆಯ ಖಾಲಿ ನಿವೇಶನದ ಬಳಿ ಓಮ್ನಿ ವಾಹನ ನಿಲ್ಲಿಸಿಕೊಂಡು ಅದರಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಕೇರಳದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಜಾರಿ

ಆರೋಪಿ ಅನಂತು 2016ನೆ ಸಾಲಿನಲ್ಲಿ ಪಾಲಕ್ಕಾಡ್ ಜಿಲ್ಲೆಯ ಕೋಲಂಕೋಡ್ ಅಬಕಾರಿ ಠಾಣೆಯಲ್ಲಿ ದಾಖಲಾದ ಗಾಂಜಾ ಮಾರಾಟ ಮಾಡುವ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದಾನೆ. ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ.ಭೀಮಾಶಂಕರ್ ಗುಳೇದ ಅವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಉಮಾಶಂಕರ್ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಸಂತೋಷ್‍ಕುಮಾರ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇವರ ಕಾರ್ಯವೈಖರಿಯನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Kerala, Two arrested, 30 lakh, ganja, seized,

Articles You Might Like

Share This Article