Saturday, September 23, 2023
Homeಇದೀಗ ಬಂದ ಸುದ್ದಿಹುಟ್ಟು ಹಬ್ಬದ ಖುಷಿಯಲ್ಲಿ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಕಿಚ್ಚ

ಹುಟ್ಟು ಹಬ್ಬದ ಖುಷಿಯಲ್ಲಿ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಕಿಚ್ಚ

- Advertisement -

ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ತನಕ ತನ್ನದೇ ಆದ ಮ್ಯಾನೇರಿಸಂ ಮತ್ತು ನಟನೆಯಿಂದ ಹೆಸರಾಗಿರುವ ಕಿಚ್ಚ ಸುದೀಪ್ ಇಂದು ತಮ್ಮ ಐವತ್ತನೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ರಾಜ್ಯದ್ಯಂತ ತಮ್ಮ ಅಭಿಮಾನಿಗಳು ವಿವಿಧ ರೀತಿಯ ಸಮಾಜಕಾರ್ಯಗಳ ಮೂಲಕ ತಮ್ಮ ನೆಚ್ಚಿನ ನಟನನ್ನು ನೆನೆದಿದ್ದಾರೆ.

ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮಾಣಿಕ್ಯ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ಕೆಕೆ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

- Advertisement -

ಸುದೀಪ್ ಅವರು ಇಂದು ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. , ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಮೈ ಆಟೋಗ್ರಾಫ್ ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದು, ಕೆಕೆ ಅವರ ನಿರ್ದೇಶನದ ಏಳನೇ ಚಿತ್ರವಾಗಿದೆ. ಹಾಗೆಯೇ, ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರವಾಗಿದೆ .
ರತ್ನನ್ ಪ್ರಪಂಚ ಚಿತ್ರದ ಮೂಲಕ ಪ್ರಾರಂಭವಾದ ಕೆ ಆರ್ ಜಿ ಸ್ಟುಡಿಯೋಸ್ ಚಿತ್ರ ಪಯಣ, ಸತತವಾಗಿ ಮುಂದುವರೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಗುಣಮಟ್ಟದ ಚಿತ್ರಗಳು ಬಿಡುಗಡೆಯಾಗಲಿಕ್ಕೆ ಸಜ್ಜಾಗಿವೆ.

ಅಷ್ಟೇ ಅಲ್ಲದೆ ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್ ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ಎನ್‌ಡಿಎಗೆ ಮತ್ತೆ ಅಧಿಕಾರ, ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಫಿಕ್ಸ್ : ವರದಿ

ಆರ್ ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಪಕ್ಕಾ ಆಗಿದೆ. ಒಟ್ಟಾರೆ ಕಿಚ್ಚ ಸುದೀಪ್ ದೊಡ್ಡ ಬಜೆಟ್ ಸ್ಕ್ರಿಪ್ಟ್ಗಳಲ್ಲಿ ತುಂಬಾ ಬಿಜಿಯಾಗಿರುವುದಂತೂ ನಿಜ.

#KicchaSudeep, #Direction, #Movie,

- Advertisement -
RELATED ARTICLES
- Advertisment -

Most Popular