Monday, January 20, 2025
Homeಮನರಂಜನೆಬಿಗ್ ಬಾಸ್‌ನಿಂದ ಕಿಚ್ಚ ಸುದೀಪ್ ದೂರ ದೂರ

ಬಿಗ್ ಬಾಸ್‌ನಿಂದ ಕಿಚ್ಚ ಸುದೀಪ್ ದೂರ ದೂರ

ಬೆಂಗಳೂರು,ಜ.20- ಕಳೆದ 11 ವರ್ಷದ ಬಿಗ್ ಬಾಸ್ನಲ್ಲಿ ಕಳೆದ ಜೀವನ ಮರೆಯಲಾಗದ ನೆನಪು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.ಮುಂದಿನ ಭಾನುವಾರ ಬಿಗ್ಬಾಸ್ 11ರ ಆವೃತಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್ ಸಾಮಾಜಿಕ ಜಾಲ ತಾಣದಲ್ಲಿ ಭಾವನಾತಕ ವಿಷಯ ಹಂಚಿಕೊಂಡಿದ್ದಾರೆ.

ಕಳೆದ 11 ಸೀಸನ್ಗಳಿಂದ ನಾನು ಬಿಗ್ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ಮುಂದೆಯೂ ನಿಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಬರೆದುಕೊಂಡಿದ್ದಾರೆ.

ಮೊದಲು ಸೀಸನ್ 11 ನಡೆಸಿಕೊಡುವುದಿಲ್ಲ ಎಂದು ನೇರವಾಗಿ ಹೇಳಿದ್ದರು ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಶೋ ನಡೆಸಲು ಒಪ್ಪಿಗೆ ನೀಡಿದ್ದರು.ಹಿಂದೆ ಮ್ಯಾಕ್‌್ಸ ಸಿನಿಮಾದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್, ಎಷ್ಟು ಮಾಡುವುದು? ಎಲ್ಲರನ್ನೂ ರಿಪೇರಿ ಮಾಡುತ್ತಾ ಕುಳಿತುಕೊಳ್ಳಲು ನಾನು ಬಂದಿದ್ದೀನಾ? ಬೇರೆ ಕೆಲಸಗಳು ಇರುತ್ತವೆ. ತುಂಬ ಶ್ರಮ ಬೇಕು. ಅದು ಯಾರಿಗೂ ಅರ್ಥ ಆಗುತ್ತಿಲ್ಲ ಎಂದಿದ್ದರು.

ಕಳೆದ ಬಿಗ್ ಬಾಸ್ ಸೀಸನ್ ನಡೆಯುವಾಗ ನನ್ನ ಸಿನಿಮಾದ ಶೂಟಿಂಗ್ ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯುತ್ತಿತ್ತು. ಚೆನ್ನೈನಿಂದ ಅಲ್ಲಿಗೆ ಹೋಗಲು ಒಂದೂವರೆ ಗಂಟೆ ಬೇಕು. ಬೆಂಗಳೂರಿನಿಂದ ನಾನು ಅಲ್ಲಿಗೆ ಹೋಗಿ, ಅಲ್ಲಿ ಶೂಟಿಂಗ್ ಮಾಡಿ, ಮಧ್ಯರಾತ್ರಿ ಶೂಟಿಂಗ್ ಮುಗಿಸಿ, ಖಾಸಗಿ ವಿಮಾನದಲ್ಲಿ ವಾಪಸ್ ಬೆಂಗಳೂರಿಗೆ ಬಂದು ಬಿಗ್ ಬಾಸ್ ಎಪಿಸೋಡ್ ನೋಡಿ, ವೀಕೆಂಡ್ ಸಂಚಿಕೆ ಶೂಟ್ ಮಾಡಬೇಕು. ಇದರಿಂದ ನನಗೆ ತುಂಬ ಸುಸ್ತಾಗುತ್ತಿತ್ತು ಎಂದು ತಿಳಿಸಿದ್ದರು.

RELATED ARTICLES

Latest News