9 ತಿಂಗಳ ಹಿಂದೆ ಯುವಕನ ಕೊಲೆ, ಚಾರ್ಮುಡಿ ಘಾಟ್‍ನಲ್ಲಿ ಶವಕ್ಕಾಗಿ ಹುಡುಕಾಟ

Social Share

ಬೆಳ್ತಂಗಡಿ, ಜ.4- ಒಂಭತ್ತು ತಿಂಗಳ ಹಿಂದೆಯೇ ಶರತ್ ಎಂಬ ಯುವಕನನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ಕೊಟ್ಟ ಪ್ರಕರಣದಲ್ಲಿ ಹಲವು ಸಾಕ್ಷ್ಯಧಾರಗಳು ಲಭಿಸಿದ್ದು, ಪ್ರಕರಣ ನಡೆದು ಕೆಲವು ತಿಂಗಳ ನಂತರ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದ ಪತ್ರ ಹಾಗೂ ಚಿತ್ರಹಿಂಸೆ ನೀಡಿದ ದೃಶ್ಯದ ಪೆನ್ ಡ್ರೈವ್ ಕೊಲೆಯ ಸುಳಿವು ನೀಡಿದೆ.

ಬಳಿಕ ಪೊಲೀಸರು ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 10 ಜನರನ್ನು ಬಂಧಿಸಿದಾಗ ಘಟನೆಯ ಸಂಪೂರ್ಣ ಚಿತ್ರಣ ದೊರಕಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು, ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಕರೆತಂದು ಶರತ್‍ನ ಶವ ಹುಡುಕಲು ಮುಂದಾದರೂ ಶವ ಪತ್ತೆಯಾಗಿಲ್ಲ.

ಶವ ಹುಡುಕುವುದೇ ಸವಾಲು:
ದಕ್ಷಿಣಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾರ್ಮಾಡಿ ಘಾಟ್ ಸಾಕಸ್ಟು ಕಣಿವೆ ಪ್ರದೇಶಗಳನ್ನು ಹೊಂದಿದೆ. ಘಾಟ್‍ನ ಸ್ಥಳಗಳಲ್ಲಿ ವಿಪರೀತ ಪೊದೆಗಳು ಆಳವಾದ ಕಂದಕಗಳು ಇವೆ. ಘಟನೆ ನಡೆದು 9 ತಿಂಗಳು ಕಳೆದಿರುವುದರಿಂದ ಇಲ್ಲಿ ತಂದು ಎಸೆಯಲಾಗಿದೆ ಎಂದಿರುವ ಶರತ್ ಶವ ಮಳೆಗಾಲದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆಗಳಿವೆ. ಇಲ್ಲವೆ ಈ ಪ್ರದೇಶದಲ್ಲಿ ಸಾಕಷ್ಟು ವನ್ಯಮೃಗಗಳು ಇದ್ದು ಅವುಗಳ ಪಾಲಾಗಿರುವ ಶಂಕೆ ವ್ಯಕ್ತವಾಗಿದೆ.

ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು, ಬೆಂಗಳೂರು ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್, ಪಿಎಸ್ ಐ ಮತ್ತು ಸಿಬ್ಬಂದಿಗಳು ಶರತ್ ಶವ ಪತ್ತೆಹಚ್ಚುವ ಕಾರ್ಯಾಚರಣೆಗಾಗಿ ನಿನ್ನೆ ಆಗಮಿಸಿದ್ದು, ಇಂದು ಬೆಳಗ್ಗೆಯಿಂದಲೇ ಚಿಕ್ಕಮಗಳೂರು-ದಕ್ಷಿಣ ಕನ್ನಡ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ

ಸರ್ಕಾರಿ ವಿದ್ಯುತ್ ಕಂಪೆನಿಗಳ ಖಾಸಗೀಕರಣ ವಿರೋಧಿಸಿ ಸಿಬ್ಬಂದಿಗಳ ಮುಷ್ಕರ

ಘಟನೆಯ ಹಿನ್ನೆಲೆ:
ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್‍ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು. ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ. ಆದರೆ ಕಾರು ಕೊಡಿಸದೆ ಅಲ್ಲಿನ ಜನರಿಗೆ ವಂಚಿಸಿದ್ದ.ಇದರಿಂದ ಹಣ ಕೊಟ್ಟಿದ್ದ ಜನರು ಎಚ್. ಶರತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು.

ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರದ ಮಖಂಡರೊಬ್ಬರಿಗೆ ಹಣ ವಾಪಸ್ ಕೊಡಿಸುವಂತೆ ಜನ ಕೇಳಿಕೊಂಡಿದ್ದಾರೆ. ಜನರ ಮನವಿ ಮೇರೆಗೆ ಅವರು ತನ್ನ ಪುತ್ರನಿಗೆ ಹಣ ವಸೂಲಿ ಮಾಡುವಂತೆ ಹೇಳಿದ್ದರು. ಇದರಿಂದಾಗಿ ಇಲ್ಲಿಂದಲೇ ಶರತ್ ಕಿಡ್ನಾಪ್ ಮತ್ತು ಕೊಲೆ ಸಂಚು ಆರಂಭವಾಯಿತು ಎಂದು ಕೇಳಿ ಬರುತ್ತಿದೆ.

ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಕುಡುಕ

ಮುಖಂಡರ ಮಗ ಹಾಗೂ ಆತನ ಸ್ನೇಹಿತರು, ಜತೆಗೆ ಹಣ ಪಡೆದುಕೊಂಡ ಕೆಲವರು ಸೇರಿ ಶರತ್‍ನನ್ನು ಕಿಡ್ನಾಪ್ ಮಾಡಿ ಆತನ ಮೊಬೈಲ್‍ನಿಂದಲೇ ಯುವಕನ ತಂದೆ ತಾಯಿಗೆ ಫೋನ್ ಮಾಡಿ, ನಾನು ದುಡಿಯಲು ಹೋಗುತ್ತಿದ್ದೇನೆ ಹುಡುಕಬೇಡಿ ಎಂದು ಮೆಸೇಜ್ ಹಾಕಿ ಬಳಿಕ ಮೊಬೈಲ್‍ನ್ನು ಲಾರಿಯೊಂದರ ಮೇಲೆ ಎಸೆದಿದ್ದಾರೆ.

ಲಾರಿ ಮೈಸೂರು ಮಾರ್ಗವಾಗಿ ಸಾಗಿ ಹೊರ ರಾಜ್ಯಕ್ಕೆ ಪ್ರಯಾಣವಾಗಿದ್ದು ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅಷ್ಟರಲ್ಲಿ ಶರತ್‍ನನ್ನು ಬನಶಂಕರಿಯಿಂದ ಅಪಹರಿಸಿದ ಗ್ಯಾಂಗ್ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವಾಟದ ಹೊಸಹಳ್ಳಿಯ ಮಾವಿನ ತೋಟದ ಮನೆಯೊಂದರಲ್ಲಿ ಬಂಧನದಲ್ಲಿ ಇಡಲಾಗಿತ್ತು. ಬಳಿಕ ಆತನಿಗೆ ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆತನಿಗೆ ಹಿಂಸೆ ನೀಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕೊಲೆಯಾದ ಶರತ್ ನ ಶವನನ್ನು ಚಾರ್ಮಾಡಿ ಘಾಟ್‍ನಲ್ಲಿ ಎಸೆದು ಯಾರಿಗೂ ಶವದ ಸುಳಿವು ಸಿಗದಂತೆ ಮಾಡಿದ್ದರು. ಸದ್ಯ ಕಬ್ಬನ್ ಪಾರ್ಕ್ ಪೆಪೊಲೀಸರು 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿಸುತ್ತಿದ್ದಾರೆ.

Kidnap, murder, Charmudi Ghat,

Articles You Might Like

Share This Article