ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಮೇಗರವಳ್ಳಿಯಿಂದ ತೀರ್ಥಹಳ್ಳಿಗೆ ಬೃಹತ್ ಪಾದಯಾತ್ರೆ

ಕ್ಷೇತ್ರಾದ್ಯಂತ ಅಡಿಕೆ ಗಿಡ ಮತ್ತು ಮರಗಳಿಗೆ ವ್ಯಾಪಿಸುತ್ತಿರುವ ಎಲೆಚುಕ್ಕೆ, ಹಳದಿ ರೋಗ ಹಾಗೂ ಅತಿವೃಷ್ಟಿಯಿಂದ ಬೆಳೆನಷ್ಟಕ್ಕೆ ಪರಿಹಾರ ಒದಗಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ
Social Share

ತೀರ್ಥಹಳ್ಳಿ, ಅ.19- ಕ್ಷೇತ್ರಾದ್ಯಂತ ಅಡಿಕೆ ಗಿಡ ಮತ್ತು ಮರಗಳಿಗೆ ವ್ಯಾಪಿಸುತ್ತಿರುವ ಎಲೆಚುಕ್ಕೆ, ಹಳದಿ ರೋಗ ಹಾಗೂ ಅತಿವೃಷ್ಟಿಯಿಂದ ಬೆಳೆನಷ್ಟಕ್ಕೆ ಪರಿಹಾರ ಒದಗಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ನ.19ರಂದು ಬೃಹತ್ ಪಾದಯಾತ್ರೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಅಂದು ಬೆಳಗ್ಗೆ 8.30ಕ್ಕೆ ಮೇಗರವಳ್ಳಿ ಅರಣ್ಯ ಕಚೇರಿ ಮುಂಭಾಗದಿಂದ ತೀರ್ಥಹಳ್ಳಿ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ನಂತರ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.

ಮುರುಘಾ ಶ್ರೀ ವಿರುದ್ಧ ಮೂರನೇ ಎಫ್‍ಐಆರ್ ದಾಖಲು

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ಮಲೆನಾಡು ಭಾಗದಲ್ಲಿ ಅಡಿಕೆ ತೋಟಕ್ಕೆ ಎಲೆಚುಕ್ಕೆ ಮತ್ತು ಹಳದಿ ರೋಗದಿಂದ ಬೆಳೆಗಾರರು ಮತ್ತು ಅವಲಂಬಿತ ಕೃಷಿ ಕಾರ್ಮಿಕರ ಭವಿಷ್ಯ ಸಂಪೂರ್ಣ ಕತ್ತಲೆಯಲ್ಲಿದೆ. ಬಿಜೆಪಿಯ ಕೇಂದ್ರ ಸರ್ಕಾರ ಭೂತಾನ್ ರಾಷ್ಟ್ರದಿಂದ 17 ಸಾವಿರ ಟನ್ ಹಸಿ ಅಡಿಕೆಯನ್ನು ದೇಶಕ್ಕೆ ಅಮದು ಮಾಡಿಕೊಂಡು ಅಡಿಕೆ ಬೆಳೆಗಾರರ ಮೇಲೆ ತುಂಬಲಾರದ ನಷ್ಟ ಹೊರಿಸಿದ್ದಾರೆ.

ಕ್ಷೇತ್ರದ ಶಾಸಕರು, ಗೃಹ ಸಚಿವರು ಹಾಗೂ ಅಡಿಕೆ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಅವರು ಅಡಿಕೆ ಬೆಳೆಗಾರರ ಬೆಂಬಲಕ್ಕೆ ನಿಲ್ಲದೆ, ಅಡಿಕೆ ಬೆಳೆಗಾರರ ವಿರುದ್ಧ ನಿಲುವು ತೆಗೆದುಕೊಂಡು ಬೆಳೆಗಾರರನ್ನು ದಾರಿ ತಪ್ಪಿಸಿ ಬೆಳೆಗಾರರ ನಷ್ಟಕ್ಕೆ ನೇರ ಹೊಣೆಗಾರರಾಗಿದ್ದಾರೆ ಎಂದು ದೂರಿದರು.

ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿಯಾಗಿದ್ದು, ಕೊಳೆರೋಗದಿಂದ ಅಡಿಕೆ ಮತ್ತು ಭತ್ತದ ಬೆಳೆಗಾರರು ತತ್ತರಿಸಿದ್ದಾರೆ. ಬೆಳೆಗಾರರಿಗೆ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರ ಕೊಡಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಸಂಪೂರ್ಣ ವಿಫಲರಾಗಿದ್ದಾರೆ ಎಂದರು.

ಪಕ್ಷದ ಜಿಲ್ಲೆ, ತಾಲೂಕು ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

Articles You Might Like

Share This Article