ಕಿತ್ತೂರು ಕರ್ನಾಟಕ ಬಿಜೆಪಿಯ ಭದ್ರಕೋಟೆ : ಸಿಎಂ ಬೊಮ್ಮಾಯಿ

Social Share

ಹುಬ್ಬಳ್ಳಿ,ಜ.28- ಬಿಜೆಪಿಯ ಚುನಾವಣಾ ಚಾಣುಕ್ಯ ಎಂದೇ ಹೆಸರಾಗಿರುವ ಅಮಿತ್ ಷಾ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವುದು ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಬಿಜೆಪಿಯ ಭದ್ರಕೋಟೆಯಾಗಿದೆ. ಸಮಗ್ರ ಕರ್ನಾಟಕ ದೃಷ್ಟಿಯಲ್ಲಿಟ್ಟುಕೊಂಡು ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಮಾಡುತ್ತಾರೆ. ಕಳೆದ ತಿಂಗಳು ಮಂಡ್ಯಕ್ಕೆ ಬಂದಿದ್ದ ಅವರು, ಈಗ ಉತ್ತರ ಕರ್ನಾಟಕ ಭಾಗಕ್ಕೆ ಬಂದಿದ್ದು, ಮುಂದಿನ ತಿಂಗಳು ಹೈದರಾಬಾದ್ ಕರ್ನಾಟಕಕ್ಕೆ ಬರಲಿದ್ದಾರೆ ಎಂದರು.

ಬಿಜೆಪಿ ಪಕ್ಷ, ಪಕ್ಷದ ಸಂಘಟನೆ ನಿರಂತರವಾಗಿ ನಡೆಯುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಿಂದ ಅಭಿವೃದ್ಧಿಯಾಗಿದ್ದು, ಹಲವು ಯೋಜನೆಗಳ ಉದ್ಘಾಟನೆ ಶಿಲಾನ್ಯಾಸ ಆಗುತ್ತಿದೆ.

ಕೇಂದ್ರ ನಾಯಕರು ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ನಾವು ಅದನ್ನು ಸದುಪಯೋಗಪಡಿಸಿಕೊಂಡು ರಾಷ್ಟ್ರೀಯ ನಾಯಕರ ಪ್ರಭಾವವನ್ನು ಕರ್ನಾಟಕ ರಾಜಕಾರಣಕ್ಕೆ ಪಕ್ಷ ಬಳಕೆ ಮಾಡಿಕೊಳ್ಳುತ್ತದೆ ಎಂದು ಹೇಳಿದರು.

ರಾಮಲಲ್ಲಾ ಮೂರ್ತಿ ಕುರಿತು ನಿರ್ಧಾರಕ್ಕೆ ಮಹತ್ವದ ಸಭೆ

ಬೆಳಗಾವಿ ಬಿಜೆಪಿ ನಾಯಕರಲ್ಲಿ ಭಿನ್ನಮತವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದಾರೆ. ಪಕ್ಷದ ಬೆಳವಣಿಗೆ ಮುಖ್ಯ, ಇದಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದ್ದು, ಕರ್ನಾಟಕದ ಪ್ರತಿಯೊಂದು ಭಾಗಗಳಲ್ಲೂ ಬಿಜೆಪಿ ಪಕ್ಷಕ್ಕೆ ಒಂದು ಗುರಿಯಿದ್ದು ಅದರ ಸಾಧನೆಗೆ ನಾವು ಕೆಲಸ ಮಾಡುತ್ತೇನೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಿಂಹಸ್ವಪ್ನವಾಗಿದೆ, ಕನಸಿನಲ್ಲೂ ಅವರಿಗೆ ಬಿಜೆಪಿ ಬರುತ್ತದೆ, ಹೀಗಾಗಿ ಬಿಜೆಪಿ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುತ್ತಾರೆ ಎಂದು ಇದೇ ವೇಳೆ ಕಾಂಗ್ರೆಸ್ ಕುರಿತು ಟೀಕಿಸಿದರು.

ತಮ್ಮ ಹುಟ್ಟುಹಬ್ಬಕ್ಕೆ ಇಂದು ಏನು ವಿಶೇಷವಿದೆ ಎಂದು ಕೇಳಿದಾಗ, ವಿಶೇಷವಾಗಿ ಏನೂ ಇಲ್ಲ, ಜನರು, ಅಭಿಮಾನಿಗಳು ಬಂದು ಶುಭ ಹಾರೈಸುತ್ತಾರೆ, ಪ್ರತಿನಿತ್ಯದಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಲವ್ ಫೇಲ್ಯೂರ್, ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ವೈದ್ಯ

ಕೇಂದ್ರ ಸಚಿವ ಅಮಿತ್ ಶಾ ಅವರು ಬಂದು ಇಂದು ಹುಬ್ಬಳ್ಳಿ, ಧಾರವಾಡದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನ ಉಂಟುಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದಕ್ಕೂ ಮುನ್ನ ತಮ್ಮ 63ನೇ ಹುಟ್ಟುಹಬ್ಬದ ಪ್ರಯುಕ್ತ ಹುಬ್ಬಳ್ಳಿಯಲ್ಲಿರುವ ತಂದೆ-ತಾಯಿ ಸಮಾಧಿಗೆ ಮುಖ್ಯಮಂತ್ರಿಗಳು ಭೇಟಿ ನೀಡಿದರು.

kittur karnataka, BJP, stronghold, CM Bommai,

Articles You Might Like

Share This Article