ನವದೆಹಲಿ, ಜ.8- ಪಾಕಿಸ್ತಾನ ಆತಿಥ್ಯದಲ್ಲಿ ಫೆಬ್ರವರಿ 19 ರಿಂದ ಐಸಿಸಿ ಆಯೋಜನೆಯ ಚಾಂಪಿಯನ್ಸ್ ಟ್ರೋಫಿ ನಡೆಯಲಿದ್ದು , ಕನ್ನಡಿಗ ಕೆ.ಎಲ್.ರಾಹುಲ್ ಸೇರಿದಂತೆ ಕೆಲವು ಹಿರಿಯ ಆಟಗಾರರು ಸ್ಥಾನ ಕಳೆದುಕೊಳ್ಳುವ ಸಂಭವವಿದೆ.
2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಮ ಅದ್ಭುತ ಪ್ರದರ್ಶನದಿಂದ ಭಾರತ ತಂಡವನ್ನು ಫೈನಲ್ ಗೆ ತಲುಪಿಸುವಲ್ಲಿ ಬಲ ತುಂಬಿದ್ದ ರವೀಂದ್ರ ಜಡೇಜಾ, ಮೊಹಮದ್ ಶಮಿ ಅವರು ಕೂಡ ಸ್ಥಾನ ಕಳೆದುಕೊಂಡರೆ ವೇಗಿ ಜಸ್ ಪ್ರೀತ್ ಬೂಮ್ರಾಗೆ ವಿಶ್ರಾಂತಿ ನೀಡುವ ಸಂಭವವಿದೆ.
ರಿಷಭ್ ಪಂತ್ ಅವರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆದರೆ ಆಗ ಕೆ.ಎಲ್. ರಾಹುಲ್ ಬದಲಿಗೆ ಸಂಜು ಸ್ಯಾಮ್ಸನ್ ಗೆ ಹೆಚ್ಚುವರಿ ವಿಕೆಟ್ ಕೀಪರ್ ಸ್ಥಾನ ಸಿಗುವ ಸಾಧ್ಯತೆಗಳಿವೆ.
ಯಶಸ್ವಿ ಎಂಟ್ರಿ:
ತಂಡದಲ್ಲಿ ಸಮತೋಲನ ಸಾಧಿಸುವ ದೃಷ್ಟಿಯಿಂದ ಈಗಾಗಲೇ ಟೆಸ್ಟ್ ಹಾಗೂ ಟ್ವೆಂಟಿ-20 ಕ್ರಿಕೆಟ್ ನಲ್ಲಿ ತಮ ಬ್ಯಾಟಿಂಗ್ ಝಲಕ್ ತೋರಿರುವ ಯಶಸ್ವಿ ಜೈಸ್ವಾಲ್ ಪದಾರ್ಪಣೆ ಮಾಡುವ ಸಾಧ್ಯತೆಗಳಿವೆ.
ರೋಹಿತ್- ಕೊಹ್ಲಿಗೆ ಅವಕಾಶ:
ಟೆಸ್ಟ್ ಕ್ರಿಕೆಟ್ ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಸಾಕಷ್ಟು ಟೀಕೆಗೆ ಒಳಗಾಗಿರುವ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಮತ್ತೊಮೆ ಅವಕಾಶ ನೀಡಲು ಆಯ್ಕೆ ಮಂಡಳಿ ಚಿಂತಿಸಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ/ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್/ಮೊಹಮದ್ ಶಮಿ, ರಿಂಕು ಸಿಂಗ್/ತಿಲಕ್ ವರ್ಮಾ.