Sunday, September 8, 2024
Homeಕ್ರೀಡಾ ಸುದ್ದಿ | SportsRCB ತಂಡಕ್ಕೆ ಕನ್ನಡಿಗ ಕೆ.ಎಲ್.ರಾಹುಲ್?

RCB ತಂಡಕ್ಕೆ ಕನ್ನಡಿಗ ಕೆ.ಎಲ್.ರಾಹುಲ್?

ಬೆಂಗಳೂರು,ಜು.21- ಕನ್ನಡಿಗ ಕೆ.ಎಲ್ ರಾಹುಲ್ ಮತ್ತೆ RCB ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.
ಸಧ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿರುವ ರಾಹುಲ್ 2025ರಲ್ಲಿ ಆರ್‍ಸಿಬಿ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಗಳಿವೆ ಎಂದು ತಿಳಿದುಬಂದಿದೆ. ಲಕ್ನೋ ಸೂಪರ್ ಜೈಂಟ್ಸ ತಂಡದ ನಾಯಕ ಕೆಎಲ್ ರಾಹುಲ್ ಐಪಿಎಲ್ ಸೀಸನ್ 18 ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಲಕ್ನೋ ತಂಡದಿಂದ ರಾಹುಲ್ ಹೊರಬರುವುದು ಬಹುತೇಕ ಖಚಿತವಾಗಿದೆ.

ಈ ನಿರ್ಧಾರಕ್ಕೆ ಮುಖ್ಯ ಕಾರಣ, ಕಳೆದ ಬಾರಿಯ ಐಪಿಎಲ್ ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ ತಂಡದ ಮಾಲೀಕ ಸಂಜಯ್ ಗೊಯೆಂಕಾ ಮೈದಾನದಲ್ಲೇ ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ದೃಶ್ಯಗಳು ಕ್ಯಾಮೆರಾ ದಲ್ಲಿ ಸೆರೆಯಾಗಿ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ರಾಹುಲ್ ಎಲïಎಸ್‍ಜಿ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದ್ದವು.

ಇದೀಗ ಈ ಸುದ್ದಿಯು ಮತ್ತೆ ಮುನ್ನಲೆಗೆ ಬಂದಿದ್ದು, ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗುಡ್ ಬೈ ಹೇಳುವುದು ಖಚಿತ ಎನ್ನಲಾಗುತ್ತಿದೆ. ಇದರ ಜೊತೆಗೆ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳ ಲಿದ್ದು, ಈ ವೇಳೆ ಅವರನ್ನು ಖರೀದಿಸಲು ಆರ್‍ಸಿಬಿ ಆಸಕ್ತಿ ಹೊಂದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಏಕೆಂದರೆ ಕೆಎಲ್ ರಾಹುಲ್ ಈ ಹಿಂದೆ ಆರ್‍ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ್ದರು. ಅಲ್ಲದೆ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಅವರ ಸ್ಥಾನ ತುಂಬಬಲ್ಲ ಆಟಗಾರನ ಅವಶ್ಯಕತೆ ತಂಡಕ್ಕಿದೆ. ಹೀಗಾಗಿ -Á್ರಂಚೈಸಿಯು ವಿಕೆಟ್ ಕೀಪರ್ ಬ್ಯಾಟ್ಸ ಮನ್ ಆಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಆರ್‍ಸಿಬಿ ತಂಡದ ನಾಯಕ ಡುಪ್ಲೆಸಿಸïಗೆ ಈಗ 39 ವರ್ಷ. ಅಂದರೆ ಮುಂದಿನ ಸೀಸನ್ ವೇಳೆ ಅವರಿಗೆ 40 ವರ್ಷ ಆಗಿರಲಿದೆ. ಭವಿಷ್ಯದ ದೃಷ್ಟಿಯಿಂದ ತಂಡಕ್ಕೆ ಹೊಸ ನಾಯಕನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆಯಿದೆ. ಇತ್ತ ಕೆಎಲ್ ರಾಹುಲ್ ಆಯ್ಕೆಯಿಂದ ಆರ್‍ಸಿಬಿ ಈ ಎರಡು ಸ್ಥಾನಗಳನ್ನು ತುಂಬಬಹುದು.

ಅಂದರೆ ನಾಯಕನಾಗಿ ಎರಡು ಬಾರಿ ಲಕ್ನೋ ಸೂಪರ್ ಜೈಂಟ್ಸ ತಂಡವನ್ನು ಪ್ಲೇಆಫ್ïಗೆ ಕೊಂಡೊಯ್ದಿರುವ ಕೆಎಲ್ ರಾಹುಲ್ ಈಗಾಗಲೇ ತಮ್ಮ ನಾಯಕತ್ವದ ಸಾಮಥ್ರ್ಯವನ್ನು ತೆರೆದಿಟ್ಟಿದ್ದಾರೆ. ಇದರ ಜೊತೆಗೆ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿಯೂ ಐಪಿಎಲïನಲ್ಲಿ ಮಿಂಚಿದ್ದಾರೆ.

RELATED ARTICLES

Latest News