ಬೆಂಗಳೂರು, ಆ.5- ಕೆಎಂಎಫ್ ಮತ್ತು ನಂದಿನಿ ಬ್ರ್ಯಾಂಡ್‍ಅನ್ನು ಉತ್ತುಂಗಕ್ಕೆ ಕೊಂಡೊಯ್ಯುವಂತೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಕರೆ ನೀಡಿದರು. ನಗರದ ಯಲಹಂಕದಲ್ಲಿರುವ ಕರ್ನಾಟಕ ಸಹಕಾರ ಹಾಲು ಮಹಾಮಂಡಳದ ಮದರ್ ಡೇರಿ ಘಟಕಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಹಾಮದ ಹಿರಿಯ ಅಧಿಕಾರಿಗಳು ಮದರ್ ಡೇರಿಯ ಹಾಲಿನ ಪುಡಿ ಘಟಕ ಮತ್ತು ಇತರೆ ಚಟುವಟಿಕೆಗಳ ಬಗ್ಗೆ ಗಣ್ಯರಿಗೆ ವಿವರಿಸಿದರು. ಇದನ್ನು ತಿಳಿದು ಅಮಿತ್ ಷಾ ಶ್ಲಾಘಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕ ಎಸ್.ಆರ್. ವಿಶ್ವನಾಥ್, ರಾಜ್ಯ ಸರ್ಕಾರದ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಹೀಮ್, ಸಹಕಾರ ಸಂಘಗಳ ನಿಬಂಧಕ ಡಾ.ರಾಜೇಂದ್ರ ಕೆ., ಕಹಾಮದ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಹಾಜರಿದ್ದರು.