ಹಾಲಿನ ದರ ಹೆಚ್ಚಿಸುವಂತೆ ಒಕ್ಕೂಟಗಳ ಮನವಿ

Social Share

ಬೆಂಗಳೂರು, ಜ.18- ಪ್ರತಿ ಲೀಟರ್ ಹಾಲಿನ ದರವನ್ನು 3ರೂ. ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳು ಕೆಎಂಎಫ್‍ಗೆ ಮನವಿ ಮಾಡಿವೆ. ಹಾಲು ಒಕ್ಕೂಟಗಳು ಮಾಡಿರುವ ಹಾಲಿನ ದರದ ಹೆಚ್ಚಳದ ಬೇಡಿಕೆ ಬಗ್ಗೆ ಕೆಎಂಎಫ್ ಅಧ್ಯಕ್ಷರಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಪ್ರಸ್ತುತ 37ರೂ. ಪ್ರತಿ ಲೀಟರ್ ಹಾಲಿನ ದರವನ್ನು ಅದನ್ನು 40ರೂ.ಗೆ ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟವನ್ನು ಮನವಿ ಮಾಡಿವೆ. ಈ ಪ್ರಸ್ತಾವವನ್ನು ಸಿಎಂ ಬಳಿ ಚರ್ಚಿಸಿ ಅನುಮತಿ ನೀಡಿದರೆ ದರ ಹೆಚ್ಚಳ ಮಾಡಲಾಗುವುದು. ಹೆಚ್ಚಳ ಮಾಡಿದ ಹಣವನ್ನು ರೈತರಿಗೆ ನೀಡಲಾಗುವುದು ಎಂದು ಇತ್ತೀಚೆಗೆ ನಡೆದ ಕೆಎಂಎಫ್ ಸರ್ವಸದಸ್ಯರ ಸಭೆಯಲ್ಲಿ ಹೇಳಿದ್ದಾರೆ.
ಪ್ರಸ್ತುತ ಬೆಳಗಾವಿ ಪ್ರವಾಸದಲ್ಲಿರುವ ಕೆಎಂಎಫ್ ಅಧ್ಯಕ್ಷರು ನಗರಕ್ಕೆ ಮರಳಿದ ನಂತರ ಮುಖ್ಯಮಂತ್ರಿ ಜತೆ ಹಾಲಿನ ದರ ಹೆಚ್ಚಳದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಹೆಚ್ಚಳಕ್ಕೆ ಅನುಮತಿ ಕೊಟ್ಟರೆ ಇನ್ನೊಂದು ವಾರದಲ್ಲಿ ಹಾಲಿನ ದರ ಪರಿಷ್ಕರಣೆಯಾಗಲಿದೆ.
ಒಂದು ವೇಳೆ ಸರ್ಕಾರ ಅನುಮತಿ ನೀಡದಿದ್ದರೆ ಈಗಿರುವ ದರವೇ ಮುಂದುವರಿಯಲಿದೆ. ಹೀಗಾಗಿ ನಂದಿನಿ ಹಾಲಿನ ದರ ಹೆಚ್ಚಳದ ವಿಚಾರ ಸಿಎಂ ಅಂಗಳವನ್ನು ತಲುಪಲಿದ್ದು, ಯಾವ ನಿರ್ಧಾರ ಪ್ರಕಟಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Articles You Might Like

Share This Article