ಚಾಕುವಿನಿಂದ ಹಲ್ಲೆ ನಡೆಸಿ ಮೊಬೈಲ್ ಸುಲಿಗೆ ಮಾಡಿದ್ದ ಇಬ್ಬರ ಬಂಧನ

Social Share

ಬೆಂಗಳೂರು, ಮಾ.3- ಚಾಕುವಿನಿಂದ ಹಲ್ಲೆ ಮಾಡಿ ಮೊಬೈಲ್ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ 1 ಲಕ್ಷ ರೂ. ಬೆಲೆಯ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಮತ್ತು ಚಾಕು ವಶಪಡಿಸಿಕೊಂಡಿದ್ದಾರೆ. ಜೆಜೆ ನಗರದ ಸಲ್ಮಾನ್ ಮತ್ತು ಚಂದಾಪುರದ ಇಜಾಮಿನ್ ಬಂಧಿತ ಆರೋಪಿಗಳು.
ಇವರ ಬಂಧನದಿಂದ ಈ ಹಿಂದೆ ನಡೆದಿದ್ದ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಫೆ.25ರಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ವ್ಯಕ್ತಿಯೊಬ್ಬರು ರಸ್ತೆ ಬದಿ ನಿಂತು ಬೌನ್ಸ್ ಗಾಡಿ ಬುಕ್ ಮಾಡುತ್ತಿದ್ದಾಗ ಇಬ್ಬರು ದರೋಡೆಕೋರರು ಇವರ ಬಳಿ ಬಂದು ಚಾಕುವಿನಿಂದ ಹಲ್ಲೆ ಮಾಡಿ ಐ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‍ಸ್ಪೆಕ್ಟರ್ ವಸಂತ್ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿಗಳನ್ನು ಪತ್ತೆ ಹಚ್ಚಿ ಬಂಸಿದ್ದಾರೆ.  ಆರೋಪಿಗಳು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಕೆಂಗೇರಿ ಸೇರಿದಂತೆ ಈ ಹಿಂದೆ ಎಸ್‍ಆರ್ ನಗರ, ಬನಶಂಕರಿ, ವಿಲ್ಸನ್ ಗಾರ್ಡನ್‍ನಲ್ಲಿ ನಡೆಸಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು ಒಂದು ಲಕ್ಷ ರೂ. ಬೆಲೆಯ ಐ-ಫೋನ್-11 ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್, ಚಾಕು ವಶಪಡಿಸಿಕೊಳ್ಳುವಲ್ಲಿ ಕೆಂಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.

Articles You Might Like

Share This Article