Tuesday, May 7, 2024
Homeರಾಜ್ಯಕೋಚಿಮೂಲ್ ನೇಮಕಾತಿ ಅಕ್ರಮ : 10 ಮಂದಿಗೆ ಇಡಿ ನೋಟಿಸ್

ಕೋಚಿಮೂಲ್ ನೇಮಕಾತಿ ಅಕ್ರಮ : 10 ಮಂದಿಗೆ ಇಡಿ ನೋಟಿಸ್

ಬೆಂಗಳೂರು,ಜ.13- ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮಹಾಮಂಡಳಿಯ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ತಿಂಗಳ 16ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕುಲಸಚಿವರು ಸೇರಿದಂತೆ 10 ಮಂದಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ ಇದೇ ತಿಂಗಳ 16ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ಕೂಚಿಮೂಲ್ ಕುಲಸಚಿವರು ಮತ್ತು ಹತ್ತು ಮಂದಿಗೆ ಶನಿವಾರ ನೋಟಿಸ್ ಜಾರಿ ಮಾಡಿದೆ. ವಿವಿಧ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ತಲಾ 20ರಿಂದ 30 ಲಕ್ಷ ಹಣ ಪಡೆದುಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ಸೂಚನೆ ಕೊಟ್ಟಿದೆ.

ಕಳೆದ ಸೋಮವಾರ ಮತ್ತು ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರ ಕಚೇರಿ, ಮನೆ ಸೇರಿದಂತೆ ಮತ್ತಿತರ ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖಾ ತಂಡ ಸತತವಾಗಿ ಎರಡು ದಿನಗಳ ಕಾಲ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

ದಾಳಿ ನಡೆದ ಎರಡು ದಿನಗಳ ನಂತರ ಪತ್ರಿಕಾ ಪ್ರಕಟಣೆ ಹೊರಡಿಸಿದ ಇಡಿಯವರು , ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮನೆ, ಕಚೇರಿ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಕೇಸ್ ದಾಖಲಿಸಿ ಇಡಿ ತನಿಖೆ ಮಾಡುತ್ತಿದೆ.

150 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಅಕ್ರಮವಾಗಿ ಹಂಚಿಕೆ ಪ್ರಕರಣ ಸಂಬಂಧ ಶೋಧ ವೇಳೆ 25 ಲಕ್ಷಕ್ಕೂ ಹೆಚ್ಚು ಹಣ, 50 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ ಪತ್ರ ಪತ್ತೆಯಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿ ವೇಳೆ ಡಿಜಿಟಲ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿತ್ತು. ಅಕ್ರಮ ಹಣ ವರ್ಗಾವಣೆ, ಹಣಕ್ಕಾಗಿ ಉದ್ಯೋಗ ಮಾರಾಟ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಮಾಲೂರು ಶಾಸಕ, ಹಿಂದಿನ ತಹಶೀಲ್ದಾರ್ ನಾಗರಾಜ್ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್‍ನ ಆಧಾರದಲ್ಲಿ ತನಿಖೆ ಮಾಡಲಾಗಿದೆ.

ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಸಡಗರ

ಜನವರಿ 8, 9ರಂದು ದಾಳಿ ನಡೆಸಿ ತನಿಖೆ ನಡೆಸಿದ್ದ ಇಡಿ ಅಕಾರಿಗಳು, ಜಿಲ್ಲೆಯ ಮಾಲೂರು ತಾಲೂಕಿನಲ್ಲಿ 150 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಹಂಚಿಕೆ ಮಾಡಿದ ಆರೋಪ ಮಾಡಲಾಗಿತ್ತು. ಒಂದೇ ತಿಂಗಳಲ್ಲಿ 4 ಸಭೆ ನಡೆಸಿ, ನಕಲಿ ದಾಖಲೆ ಸೃಷ್ಟಿಸಿ 80 ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಮಂಜೂರು ಮಾಡಿದ್ದ ಆರೋಪ ಕೇಳಿಬಂದಿತ್ತು. ಈ ಕುರಿತಾಗಿ ಶಾಸಕ ಕೆ.ವೈ.ನಂಜೇಗೌಡರ ವಿರುದ್ದ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಮಮಂದಿರ ಉದ್ಘಾಟನೆ ಬಹಿಷ್ಕರಿಸಿರುವುದು ಧರ್ಮಕ್ಕೆ ಧಕ್ಕೆ ತರುವ ಉದ್ದೇಶದಿಂದಲ್ಲ : ಖರ್ಗೆ

ಕೋಲಾರ ಹಾಲು ಒಕ್ಕೂಟದಲ್ಲಿ ಹೊಸ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ವಿಚಾರವಾಗಿ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮತ್ತೊಂದು ಪ್ರಕರಣದಲ್ಲಿಯೂ ಹಗರಣ ನಡೆಸಿರುವ ಆರೋಪ ಮಾಡಲಾಗಿದೆ. ಪ್ರತಿ ಉದ್ಯೋಗಕ್ಕೆ 20ರಿಂದ 30 ಲಕ್ಷ ರೂ. ಲಂಚ ಪಡೆದಿರುವ ಆರೋಪ ಮಾಡಲಾಗಿದ್ದು, ಸಂದರ್ಶನದ ಪ್ರಕ್ರಿಯೆ ದುರ್ಬಳಕೆ ಮಾಡಿಕೊಂಡಿರುವ ಮಾಹಿತಿ ಇಡಿಗೆ ಲಭ್ಯವಾಗಿತ್ತು. ಒಕ್ಕೂಟದ ಅಧ್ಯಕ್ಷ ಕೆ.ವೈ ನಂಜೇಗೌಡ ಸೇರಿದಂತೆ ನಾಲ್ಕು ಮಂದಿ ಸದಸ್ಯರ ವಿರುದ್ದ ಆರೋಪ ಕೇಳಿಬಂದಿದ್ದು, ಕೆಲವು ರಾಜಕಾರಣಿಗಳು ಶಿಫಾರಸು ಮಾಡಿದ್ದ 30 ಮಂದಿ ಅಭ್ಯರ್ಥಿಗಳ ಪಟ್ಟಿ ಪತ್ತೆಯಾಗಿತ್ತು.

RELATED ARTICLES

Latest News