Friday, May 3, 2024
Homeಜಿಲ್ಲಾ ಸುದ್ದಿಗಳುಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್

ಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್

ಮಡಿಕೇರಿ, ನ.16-ಕೇರಳ ಎಸ್‍ಟಿಎಫ್ ಪೊಲೀಸ್ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಘಟನೆಯಲ್ಲಿ ಕೆಲ ನಕ್ಸಲರು ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದ್ದು, ಅವರು ರಕ್ಷಣೆಗಾಗಿ ಕರ್ನಾಟಕದ ಕೊಡಗು ಅರಣ್ಯ ವ್ಯಾಪ್ತಿಗೆ ಬರಬಹುದೆಂಬ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಹಲವೆಡೆ ಭದ್ರತೆಯನ್ನು ಹೆಚ್ಚಿಸಿದ್ದಾರೆ.ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ : ಹೆಚ್‌ಡಿಕೆ ಟೀಕೆ

ಕೇರಳ ಪೊಲೀಸರ ಕಾರ್ಯಾಚರಣೆ ವೇಳೆ ನಕ್ಸಲರ ಬಳಿಯಿದ್ದ 3 ರೈಫಲ್‍ಗಳು ಮೊಬೈಲ್ ಫೋನ್‍ಗಳು ವಶಪಡಿಸಿಕೊಳ್ಳಲಾಗಿದೆ. ಕೊಡಗಿನ ಸುಮಾರು 5 ಕಿ.ಮೀ. ದೂರದಲ್ಲಿ ಈ ಗುಂಡಿನ ಚಕಮಕಿ ನಡೆದಿದೆಯೆಂದು ಮೂಲಗಳು ತಿಳಿಸಿದೆ.

RELATED ARTICLES

Latest News