ಕೊಡಗಿನಲ್ಲಿ ಯಾವ ಪ್ರತಿಭಟನೆಗೂ ಅವಕಾಶ ಇಲ್ಲ: ಆರಗ ಜ್ಞಾನೇಂದ್ರ

Social Share

ಬೆಂಗಳೂರು,ಆ.23- ಕೊಡಗಿನಲ್ಲಿ ಪ್ರತಿಭಟನೆ ಮಾಡಲು ಯಾವುದೇ ಪಕ್ಷಕ್ಕೆ ಅವಕಾಶವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಕೆಜಿಎಫ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ರಾಜಕೀಯ ಪಕ್ಷಗಳ ಜಗಳದಿಂದ ಕೊಡಗಿನಲ್ಲಿ ಶಾಂತಿ ಕದಡಬಾರದು. ಹಾಗಾಗಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆಯನ್ನು ಯಾರೂ ಕೂಡ ಉಲ್ಲಂಘಟನೆ ಮಾಡಬಾರದು ಎಂದು ಹೇಳಿದ್ದಾರೆ. ನಮಗೆ ಕೊಡಗಿನ ಜನರ ಶಾಂತಿ ಮುಖ್ಯ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಕಾಂಗ್ರೆಸ್ ಹಮ್ಮಿಕೊಂಡಿರುವ ಕೊಡಗು ಚಲೋ ವಿಚಾರದಲ್ಲಿ ನಮಗೆ ಯಾವುದೇ ರೀತಿಯ ಭಯವಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಗಣೇಶೋತ್ಸವ ಸಾಂಸ್ಕøತಿಕ ಹಬ್ಬವಾಗಿದೆ. ಗಣೇಶೋತ್ಸವ ಸಂದರ್ಭದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಬೇಕು ಎಂದ ಅವರು, ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಸ್ಥಳೀಯ ಆಡಳಿತ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Articles You Might Like

Share This Article