Sunday, May 19, 2024
Homeರಾಜಕೀಯಕೋಲಾರ ಕಾಂಗ್ರೆಸ್ ಅಭ್ಯರ್ಥಿ ಸಂಜೆಯೊಳಗೆ ಫೈನಲ್ : ಡಿಕೆಶಿ

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಸಂಜೆಯೊಳಗೆ ಫೈನಲ್ : ಡಿಕೆಶಿ

ಬೆಂಗಳೂರು,ಮಾ.28- ಕೋಲಾರ ಲೋಕಸಭಾ ಕ್ಷೇತ್ರ ಅಭ್ಯರ್ಥಿಯ ಆಯ್ಕೆಗೆ ಸಂಬಂಧಪಟ್ಟಂತೆ ಎಲ್ಲರೂ ದಾರಿಗೆ ಬಂದಿದ್ದಾರೆ. ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ರಾಜೀನಾಮೆ ನೀಡುವುದಿಲ್ಲ. ಅಭ್ಯರ್ಥಿ ಆಯ್ಕೆ ವಿಷಯವಾಗಿ ಕೆಲವರಿಂದ ಒತ್ತಡವಿದೆ. ಈವರೆಗೂ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ನಾನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ದೆಹಲಿಯ ನಾಯಕರ ಜೊತೆಯಲ್ಲೂ ಚರ್ಚೆ ಮಾಡಿದ್ದೇನೆ. ಕೋಲಾರ ರಾಜ್ಯದಲ್ಲೇ ಕಾಂಗ್ರೆಸ್ ಗೆಲುವು ಕಾಣುವ ಮೊದಲ ಕ್ಷೇತ್ರ, ಎಲ್ಲರೂ ಒಟ್ಟಿಗೆ ಸೇರಿ ಗೆಲ್ಲಿಸುತ್ತಾರೆ ಎಂದು ಹೇಳಿದ್ದಾರೆ.

RELATED ARTICLES

Latest News