Friday, October 4, 2024
Homeಜಿಲ್ಲಾ ಸುದ್ದಿಗಳು | District Newsಕೊಳ್ಳೇಗಾಲ : ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆ

ಕೊಳ್ಳೇಗಾಲ : ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆ

Kollegala Dead body of a person in the car in a rotten state

ಕೊಳ್ಳೇಗಾಲ,ಸೆ.22– ತಾಲೂಕಿನ ಸತ್ತೇಗಾಲ ಹ್ಯಾಂಡ್‌ ಪೋಸ್ಟ್‌ನ ಹೋಟೆಲ್‌ ಒಂದರ ಬಳಿ ಕಾರಿನಲ್ಲಿ ವ್ಯಕ್ತಿಯೊಬ್ಬ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಕಳೆದ ಮೂರು ನಾಲ್ಕು ದಿನಗಳಿಂದ ಹೋಟೆಲ್‌ ಮುಂದೆ ಕಾರು ನಿಂತಿರುವುದನ್ನು ಗಮನಿಸಿದ ಸಾರ್ವಜನಿಕರು ಯಾರೋ ಪ್ರವಾಸಿಗರು ಕಾರನ್ನು ಇಲ್ಲಿ ನಿಲ್ಲಿಸಿ ಹೋಗಿರಬಹುದು ಎಂದುಕೊಂಡಿದ್ದರು.

ಆದರೆ ನಿನ್ನೆ ಸಂಜೆ ಕಾರಿನಲ್ಲಿ ಕೆಟ್ಟ ವಾಸನೆ ಬರುತ್ತಿದ್ದನ್ನು ಗಮನಿಸಿದ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿ ಕಾರಿನ ಬಳಿ ನೋಡಿದ್ದಾರೆ. ಕಾರಿನೊಳಗೆ ಹಿಂಬದಿಯ ಸೀಟಿನಲ್ಲಿ ವ್ಯಕ್ತಿ ಮಲಗಿರುವುದು ಕಂಡಿದೆ. ದುರ್ವಾಸನೆ ಬರುತ್ತಿರುವುದರಿಂದ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅನುಮಾನಗೊಂಡು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಸಾರ್ವಜನಿಕರಿಂದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಳ್ಳೇಗಾಲ ವೃತ್ತ ನಿರೀಕ್ಷಕ ಶಿವಮಾದಯ್ಯ ಹಾಗೂ ಗ್ರಾಮಾಂತರ ಠಾಣೆ ಪಿಎಸ್‌‍ಐ ಸುಪ್ರೀತ್‌ ತಮ ಸಿಬ್ಬಂದಿಗಳೊಡನೆ ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ವ್ಯಕ್ತಿಯೊಬ್ಬ ಹಿಂಬದಿಯ ಸೀಟಿನಲ್ಲಿ ಮೃತಪಟ್ಟಿರುವುದು ಕಂಡು ಬಂದಿದೆ.

ನಂತರ ಮೃತ ದೇಹದ ವಾರಸುದಾರರ ಪತ್ತೆಗೆ ಇಳಿದ ಕೊಳ್ಳೇಗಾಲ ಪೊಲೀಸರಿಗೆ ಮೃತ ವ್ಯಕ್ತಿ ಬೆಂಗಳೂರಿನ ಅಗ್ರಹಾರದ ಮೋಹನ್‌ ಎಂಬ ಮಾಹಿತಿ ಲಭ್ಯವಾಗಿದೆ. ನಂತರ ಅವರ ಸಂಬಂಧಿಕರನ್ನು ಸಂಪರ್ಕಿಸಲಾಗಿ ಮೃತ ಮೋಹನ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದರು ಎಂಬುದು ತಿಳಿದು ಬಂದಿದೆ. ವಾರಸುದಾರರಿಗೆ ವಿಚಾರ ಮುಟ್ಟಿಸಿದ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News