ಕೊಪ್ಪಳ, ಫೆ.18: ಅಂಗನವಾಡಿಯಲ್ಲಿ ಆಟವಾಡುತ್ತಿದ್ದು ವರ್ಷದ ಬಾಲಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ. ಅಲಿಯಾ ಮಹ್ಮದ್ ರಿಯಾಜ್ (5) ಮೃತ ಬಾಲಕಿ.
ದೈನಂದಿನಂತೆ ಬಾಲಕಿ ಅಂಗನವಾಡಿಗೆ ಹೋಗಿದ್ದಳು ಬೆಳಿಗ್ಗೆ ಉಪಹಾರ ಸೇವಿಸಿ ಚಟುವಟಿಕೆಯಿಂದಲೇ ಇದ್ದಳು, ಎಲ್ಲ ಮಕ್ಕಳಂತೆ ಆಟವಾಡಿಕೊಂಡಿದಾಗ ಮಧ್ಯಾಹ್ನ ದಿಢೀರನೆ ಕುಸಿದು ಬಿದ್ದಿದ್ದಾಳೆ. ಪೀಟ್ಸ್ ಬಂದಂತೆ ಒದ್ದಾಡಿದಾಗ ಅಂಗನವಾಡಿ ಸಹಾಯಕಿ ಕೂಡಲೇ ಪಾಲಕರಿಗೆ ಮಾಹಿತಿ ನೀಡಿದರು.
ಕೂಡಲೆ ಬಾಲಕಿಯನ್ನು ಸಮೀಪದ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ಮುನ್ನವೇ ಬಾಲಕಿ ಮೃತಪಟ್ಟಿದ್ದಳು. ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಬಾಲಕಿ ದೇಹದಲ್ಲಿ ಗಾಯದ ಗುರುತು ಪರಿಶೀಲಿಸಿದ್ದಾರೆ. ಜೊತೆಗೆ ಎಕ್ಸರೇ ಮಾಡಿ, ಬಾಲಕಿ ಏನಾದರೂ ನುಂಗಿದ್ದಾಳಾ ಎಂದು ಕೂಡ ಪರಿಶೀಲನೆ ಮಾಡಿದ್ದಾರೆ.
ಆದರೆ, ದೇಹದೊಳಗೆ ಏನೇನು ಇರಲಿಲ್ಲ ಎಂಬುವುದು ಗೊತ್ತಾಗಿದೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮಗು ಮೃತಪಟ್ಟಿದೆ ಅಂತ ವೈದ್ಯರು ಪಾಲಕರಿಗೆ ಮಾಹಿತಿ ನೀಡಿದ್ದಾರೆ.
ದಿಢೀರನೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವುದರಿಂದ ಕೆಲವರಿಗೆ ಈ ರೀತಿಯಾಗುತ್ತದೆ. ಬಾಲಕಿ ಸಾವಿಗೆ ಇದೇ ಕಾರಣ ಅಂತ ಪೋಷಕರಿಗೆ ತಿಳಿಸಿದ್ದಾರೆ. ಆ
ರಂಭದಲ್ಲಿ ಅಂಗನವಾಡಿ ಸಿಬ್ಬಂದಿ ವಿರುದ್ದ ಆಕ್ರೋಶ ಹೊರಹಾಕಿದ್ದ ಪೋಷಕರು, ವೈದ್ಯರ ಮಾಹಿತಿ ನಂತರ ಸುಮ್ಮನಾಗಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.