ಆಯ್ಕೆ ಮಾಡಿದ ಅಭ್ಯರ್ಥಿಯನ್ನು ಒಪ್ಪಿಕೊಂಡು ಒಟ್ಟಾಗಿ ಕೆಲಸ ಮಾಡಿ : ಡಿಕೆಶಿ

Social Share

ಬೆಂಗಳೂರು,ನ.25- ಮುಂದಿನ ವಿಧಾನಸಭೆ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅದನ್ನು ಎಲ್ಲರ ಒಪ್ಪಿಕೊಂಡು ಒಟ್ಟಾಗಿ ಕೆಲಸ ಮಾಡಿ. ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟ ಸೂಚನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿದವರು ಹಿರಿಯ ನಾಯಕರುಗಳನ್ನು ಭೇಟಿ ಮಾಡಿ ಒತ್ತಡ ಹೇರುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ ಒಂದು ಕ್ಷೇತ್ರದಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲು ಸಾಧ್ಯ. ಇದನ್ನು ಎಲ್ಲರು ಅರ್ಥ ಮಾಡಿಕೊಳ್ಳಬೇಕು.

ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಎಲ್ಲ ನಾಯಕರು ಒಮ್ಮತದ ನಿರ್ಣಯ ತೆಗೆದುಕೊಳ್ಳುತ್ತೇವೆ. ಉಳಿದ ಅರ್ಜಿದಾರರು ಇದನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದಾದರೆ ನಂತರ ಎಲ್ಲರಿಗೂ ಅಕಾರ ಸಿಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದರು.

ಅಮಾನತುಗೊಂಡ ಟ್ವಿಟರ್ ಖಾತೆಗಳು ಮರು ಸ್ಥಾಪನೆಯಾಗಲಿವೆ

ಕ್ಷೇತ್ರಗಳ ಮಟ್ಟದಲ್ಲಿ ಪ್ರತಿಯೊಬ್ಬರಿಗೂ ಅವರದೇ ಆದಂತಹ ಸಾಮಥ್ರ್ಯವಿರುತ್ತದೆ, ಕೆಲವರಿಗೆ ಹತ್ತು, ಇನ್ನು ಕೆಲವರಿಗೆ ನೂರು ಮತ್ತೆ ಕೆಲವರಿಗೆ 50 ಮತಗಟ್ಟೆಗಳನ್ನು ನಿಭಾಯಿಸುವ ಸಾಮಥ್ರ್ಯವಿರುತ್ತದೆ. ಯಾರನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಹೇಳಿದರು.

ಕಾಂಗ್ರೆಸ್ ಟಿಕೆಟ್‍ಗಾಗಿ ಅರ್ಜಿ ಆಹ್ವಾನಿಸಿರುವುದು ಇದೇ ಮೊದಲೇನಲ್ಲ. ಈ ಮುಂಚೆಯೂ ನಡೆದಿದೆ. ಅರ್ಜಿಗಳನ್ನ ಕರೆಯಲಾಗಿತ್ತು. ಆದರೆ ಆಗೆಲ್ಲ ಸದ್ದು ಮಾಡಿರಲಿಲ್ಲ. ಈಗ ಸದ್ದು ಹೆಚ್ಚಾಗಿದೆ.

ಇ-ಕಾಮರ್ಸ್ ದೈತ್ಯ ಅಮೆಜಾನ್‍ಗೆ ಸಂಕಷ್ಟ

ಪಕ್ಷದ ಚಟುವಟಿಕೆಗಳಿಗೆ ಹಣದ ಅಗತ್ಯವಿದೆ. ತಮಟೆ, ಬಿಲ್ಲುಬಾಣ, ಕಚೇರಿ, ಬ್ಲಾಕ್ ಮಟ್ಟದ ಕಚೇರಿ ನಿರ್ಮಾಣ, ಬಡಬಗ್ಗರಿಗೆ ಸಹಾಯ ಮಾಡಲು, ಕಾರ್ಯಕರ್ತರಿಗೆ ತೊಂದರೆಯಾದಾಗ ನೆರವು ನೀಡಲು ಹಣದ ಅಗತ್ಯವಿದೆ. ಆ ಕಾರಣಕ್ಕಾಗಿ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿರುವವರಿಂದ ಚುನಾವಣಾ ಬಾಂಡ್ ಸ್ವೀಕರಿಸಲಾಗಿದೆ ಎಂದು ಹೇಳಿದರು.

KPCC, President, DK Shivakumar, assembly, election, Congress, candidate,

Articles You Might Like

Share This Article