ಮೋದಿ ಕಾರ್ಯಕ್ರಮಕ್ಕೆ ಮಕ್ಕಳು : ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿ ಎಂದ ಡಿಕೆಶಿ

Social Share

ಬೆಂಗಳೂರು,ನ.9- ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರುವ ಸುತ್ತೋಲೆಗೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದು ದೇಶಕ್ಕೆ ಮಾಡಿದ ಅಪಮಾನ. ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ನ.11ಕ್ಕೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದು ನಾಚಿಕೆಗೇಡಿನ ಸಂಗತಿ ಎಂದರು.

ಅಪಪ್ರಚಾರಗಳಿಂದ ನೊಂದಿರುವೆ : ನೋವು ತೋಡಿಕೊಂಡ ರಶ್ಮಿಕ ಮಂದಣ್ಣ

ರಾಜ್ಯದಲ್ಲಿ ಮೂರು ವರ್ಷದಿಂದ ಆಡಳಿತದಲ್ಲಿರುವ ಡಬಲ್ ಇಂಜಿನ್ ಸರ್ಕಾರ ತನ್ನ ಕಾರ್ಯಕ್ರಮಗಳಿಗೆ ಫಲಾನುಭವಿಗಳನ್ನು ಸೇರಿಸಬೇಕು. ಬಿಜೆಪಿ ಕಾರ್ಯಕರ್ತರು ಮತ್ತು ಜನರನ್ನು ಕರೆತಂದು ಕಾರ್ಯಕ್ರಮ ಮಾಡಬೇಕೆ ಹೊರತು ಮಕ್ಕಳನ್ನು ಕರೆತರುವುದಲ್ಲ. ಇದು ಯಾವುದೇ ಶೈಕ್ಷಣಿಕ ಕಾರ್ಯಕ್ರಮವಲ್ಲ.

ಶಾಲಾಕಾಲೇಜುಗಳ ಮಕ್ಕಳನ್ನು ತರದೆ ಇದ್ದರೆ ಮುಂದಿನ ಆಗುಹೋಗುಗಳಿಗೆ ಪ್ರಾಂಶುಪಾಲರೇ ಹೊಣೆ ಎಂದು ಸುತ್ತೋಲೆ ಹೊರಡಿಸಲಾಗಿದೆ. ಈ ವಿವಾದಿತ ಆದೇಶ ಹೊರಡಿಸಿದ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳನ್ನು ಕರೆತಂದು ಮೈಂಡ್ ವಾಶ್ ಮಾಡುವ ಹುನ್ನಾರ ನಡೆದಿದೆ. ಇದು ಸರಿಯಲ್ಲ. ಬಿಜೆಪಿಗೆ ಇಂಥ ದುಸ್ಥಿತಿ ಬರಬಾರದಿತ್ತು. ಅವರ ಕಾರ್ಯಕ್ರಮಗಳಿಗೆ ಜನ ಸೇರುತ್ತಿಲ್ಲ. ಬಿಜೆಪಿಯ ಸಂಕಲ್ಪ ಯಾತ್ರೆಯಲ್ಲಿ ಕುರ್ಚಿಗಳು ಖಾಲಿ ಇವೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲೂ ಜನ ಕಡಿಮೆ ಇದ್ದರು. ಹೀಗಾಗಿ ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರಲು ಸರ್ಕಾರ ಅಕಾರಿಗಳಿಗೆ ಆದೇಶ ನೀಡಿದೆ ಎಂದು ದೂರಿದರು.

ಇದು ಬಿಜೆಪಿಯ ದಿವಾಳಿತನ ತೋರಿಸುತ್ತದೆ. ತಕ್ಷಣವೇ ಸುತ್ತೋಲೆಯನ್ನು ಹಿಂಪಡೆಯುವುದಷ್ಟೇ ಅಲ್ಲದೆ ಪ್ರಧಾನಿ ಅವರೇ ಇದಕ್ಕೆ ಉತ್ತರ ನೀಡಬೇಕೆಂದು ಅಗ್ರಹಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರ ಹೇಳಿಕೆ ಖಂಡನೀಯ. ಅದನ್ನು ಪಕ್ಷ ಒಪ್ಪುವುದಿಲ್ಲ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ಪುನರಚ್ಚಿಸಿದರು.

ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಯಾವುದೋ ಪುಸ್ತಕದಲ್ಲಿ ಬರೆದಿದೆ ಎಂದು ಹೇಳಿದ್ದಾರೆ. ನಾನು ಆ ಪುಸ್ತಕವನ್ನು ನೋಡಿಲ್ಲ. ನಮ್ಮ ಧರ್ಮ, ಸಂಸ್ಕøತಿಯ ದೃಷ್ಟಿಯಿಂದ ಪಕ್ಷ ಈಗಾಗಲೇ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ನಾನು ಸೇರಿದಂತೆ ನಮ್ಮ ಅಭಿಪ್ರಾಯಗಳನ್ನು ಹೇಳಿದ್ದೇವೆ. ಅದಕ್ಕೆ ಬದ್ದರಾಗಿದ್ದೇವೆ ಎಂದರು.

ಬಿಜೆಪಿ ವಿವಾದಿತ ಹೇಳಿಕೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಏನು ಬೇಕಾದರೂ ಮಾಡಿಕೊಳ್ಳಲಿ. ಆ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ನಾನು ನನ್ನ ಅಭಿಪ್ರಾಯವನ್ನು ಹೇಳುತ್ತಿದ್ದು, ಸತೀಶ್ ಜಾರಕಿಹೊಳಿ ಅವರ ಈ ಹೇಳಿಕೆ ತಪ್ಪು ಎಂದು ಹೇಳಿದರು.

ದೇಶದ ಸಾಮಾನ್ಯ ಜನರ ಸೇವೆಯೇ ನನ್ನ ಪ್ರಥಮ ಆಧ್ಯತೆ : CJI ಚಂದ್ರಚೂಡ್

ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್‍ನಲ್ಲಿದ್ದರೆ ಮುಖ್ಯಮಂತ್ರಿಯಾಗುವುದಿಲ್ಲ. ಬಿಜೆಪಿಗೆ ಬರಲಿ ಎಂದು ಸಚಿವ ಮುನಿರತ್ನ ಅವರು ಆಹ್ವಾನ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಹೌದ ಸಂತೋಷ.. ಎಂದು ಪ್ರತಿಕ್ರಿಯಿಸಿ ಅಲ್ಲಿಗೆ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಜನ ಇಲ್ಲ ಎಂದಾಯ್ತಲ್ಲ ಎಂದು ನಸುನಕ್ಕರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ತಾವು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈಗ ಹಾದಿಮಧ್ಯೆ ಬಾಳೆಹಣ್ಣು, ಬಿಸ್ಕೆಟ್ ತಿನ್ನುವಾಗ ಅಭಿಮಾನಿಗಳು ಫೆÇೀಟೋ ತೆಗೆಸಿಕೊಂಡಿದ್ದಾರೆ. ಅದು ವೈರಲ್ಲಾಗಿದೆ. ನನ್ನ ಭೇಟಿಯನ್ನು ಬೇರೆ ರೀತಿ ವ್ಯಾಖ್ಯಾನಿಸಲಾಗುತ್ತಿದೆ. ನನ್ನ ವೈಯಕ್ತಿಕ ಜೀವನವೇ ಬೇರೆ, ರಾಜಕೀಯವೇ ಬೇರೆ ಹಾಗಾದರೆ ನಾನು ಎಲ್ಲೂ ಓಡಾಡಲೇಬಾರದೆಂಬ ವಿಶ್ಲೇಷಣೆಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು.

ಮುಂದಿನ ವಿಧಾನಸಭೆ ಚುನಾವಣೆಗೆ ಸ್ರ್ಪಧಿಸಲು ಟಿಕೆಟ್ ನೀಡುವಂತೆ ಯುವಕರು ಅರ್ಜಿ ಸಲ್ಲಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನೀವು ಅರ್ಜಿ ಹಾಕಿ, ನಿಮಗೂ ಅನುಕೂಲ ಮಾಡಿಕೊಡೋಣ ಎಂದು ಪ್ರರ್ತಕರ್ತರಿಗೆ ಹೇಳಿದರು.

Articles You Might Like

Share This Article