ಇಡಿ ಮುಂದೆ ಡಿ.ಕೆ.ಶಿವಕುಮಾರ್ ಮತ್ತೆ ಹಾಜರು

Social Share

ನವದೆಹಲಿ, ನ.14- ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿರುವ ನೋಟಿಸ್ ಆಧರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಯಂಗ್ ಇಂಡಿಯಾ ಸಂಸ್ಥೆಗೆ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಿ.ಕೆ.ಸುರೇಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಅದರಂತೆ ಅಕ್ಟೋಬರ್ ಏಳರಂದು ಇಬ್ಬರು ಸಹೋದರರು ವಿಚಾರಣೆಗೆ ಹಾಜರಾಗಿದ್ದರು.

ಆ ವೇಳೆ ಕೆಲವು ದಾಖಲೆಗಳನ್ನು ಸಲ್ಲಿಸಲು ಇಡಿ ಸೂಚನೆ ನೀಡಿತ್ತು. ಮತ್ತೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೂಡ ನೀಡಲಾಗಿತ್ತು. ಇತ್ತೀಚೆಗೆ ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗಿದ್ದರು.

ಭಾರತ-ಬಾಂಗ್ಲಾ ಗಡಿಯಲ್ಲಿ ಅಕ್ರಮ ವಲಸೆ ತಡೆಗೆ ವ್ಯಾಪಕ ಕ್ರಮ : ಗೃಹ ಸಚಿವಾಲಯ

ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸುವ ವೇಳೆ ಅವರನ್ನು ಸ್ವಾಗತಿಸಲು ಪೂರ್ವ ತಯಾರಿ ನಡೆಸುವುದರಲ್ಲಿ ತೊಡಗಿಸಿಕೊಂಡಿದ್ದ ಡಿ.ಕೆ.ಶಿವಕುಮಾರ್, ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ನಿನ್ನೆ ಕಾಶಿಗೆ ತೆರಳಿ ವಿಶೇಷ ಪೂಜಾ ಕೈಂಕರ್ಯ ಕೈಗೊಂಡಿದ್ದ ಡಿ.ಕೆ.ಶಿವಕುಮಾರ್ ಇಂದು ಮಧ್ಯಾಹ್ನ ದೆಹಲಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿದೆ.

ಕಡಲೆಕಾಯಿ ಪರಿಷೆಯಲ್ಲಿ ಬಡವರ ಬಾದಾಮಿ ಸವಿದ ಬೆಂಗಳೂರಿಗರು

ಜಾರಿ ನಿರ್ದೇಶನಾಲಯ ಕೇಳಿದ್ದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ ಬಳಿಕವೂ ಕೆಲ ಸ್ಪಷ್ಟನೆಗಳಿಗಾಗಿ ಖುದ್ದು ಹಾಜರಾಗುವಂತೆ ತನಿಖಾ ಸಂಸ್ಥೆ ಸೂಚನೆ ನೀಡಿತ್ತು ಎನ್ನಲಾಗಿದೆ.

Articles You Might Like

Share This Article