ಪ್ರಜಾಧ್ವನಿ ಯಾತ್ರೆ ಎದುರಾಳಿಗಳಲ್ಲಿ ಭಯ ಸೃಷ್ಟಿಸಿದೆ : ಡಿಕೆಶಿ

Social Share

ಬೆಂಗಳೂರು,ಫೆ.6- ಕಾಂಗ್ರೆಸ್ ಆಯೋಜಿಸಿರುವ ಪ್ರಜಾಧ್ವನಿ ಯಾತ್ರೆ ರಾಜಕೀಯ ಎದುರಾಳಿಗಳಿಗೆ ನಡುಕು ಉಂಟು ಮಾಡಿದ್ದು, ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನೇತೃತ್ವದ ತಂಡ ಇಂದು ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸಲಿದೆ. ಸಲೀಂ ಅಹ್ಮದ್, ಪರಮೇಶ್ವರ್ ಹಾಗೂ ನಾರಾಯಣ ಸ್ವಾಮಿ ಸೇರಿ ಹಲವು ನಾಯಕರು ಇಂದು ಯಾತ್ರೆಗಾಗಿ ಕಾಂಗ್ರೆಸ್ ಕಚೇರಿಯಿಂದ ತೆರಳುತ್ತಿದ್ದೇವೆ. ಉಳಿದ ನಾಯಕರು ನೇರವಾಗಿ ಅಲ್ಲಿಗೆ ಬರಲಿದ್ದಾರೆ ಎಂದರು.

ಇದಾದ ನಂತರ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಲ್ಲಿಂದ ಹೊಸದುರ್ಗ, ಹೊಳಲ್ಕೆರೆ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳುತ್ತೇವೆ. ನಂತರ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಅದಕ್ಕಾಗಿ ಎರಡು ಮೂರು ದಿನ ವಿರಾಮ ನೀಡಿ, ನಂತರ ಮಂಡ್ಯ, ಮೈಸೂರು ಜಿಲ್ಲೆಯ ಕ್ಷೇತ್ರಗಳಲ್ಲಿ ಯಾತ್ರೆ ಮುಂದುವರೆಸುವುದಾಗಿ ತಿಳಿಸಿದರು.

ಪರ ವಿರೋಧ ಚರ್ಚೆಗೆ ಗ್ರಾಸವಾದ ಮೋಹನ್ ಭಾಗವತ್‍ರ ಹೇಳಿಕೆ

ಯಾತ್ರೆ ಕುರಿತು ಅನ್ಯ ಪಕ್ಷಗಳ ನಾಯಕರ ಟೀಕೆ ಬಗ್ಗೆ ಕೇಳಿದಾಗ, ಸಿದ್ದರಾಮಯ್ಯ ಅವರು ನಿರಂತರ ಪ್ರವಾಸ ವೇಳಾಪಟ್ಟಿ ನಿಗದಿ ಮಾಡಿಕೊಂಡಿದ್ದಾರೆ. ನಾವು ಇಲ್ಲಿ ಹತ್ತಿರದ ಕ್ಷೇತ್ರಗಳಿಗೆ ಬೆಂಗಳೂರಿನಿಂದ ತೆರಳುತ್ತಿದ್ದೇವೆ. ನಾವು ಎಲ್ಲೆ ಹೋದರು ನಮಗೆ ಜನರಿಂದ ಸಿಗುತ್ತಿರುವ ಬೆಂಬಲಕ್ಕೆ ಮಾಧ್ಯಮಗಳ ಕ್ಯಾಮೆರಾಗಳೇ ಸಾಕ್ಷಿ.

ನಮಗೆ ಸಿಗುತ್ತಿರುವ ಜನ ಬೆಂಬಲದಿಂದ ಬಿಜೆಪಿ ಹಾಗೂ ದಳದವರಿಗೆ ಭೀತಿ ಎದುರಾಗಿದೆ. ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡಿಕೊಂಡು ಬಂದಿದ್ದೇವೆ. ಯಡಿಯೂರಪ್ಪ ಸೇರಿದಂತೆ ಯಾರೇ ನಮ್ಮ ಯಾತ್ರೆ ಪಂಚರ್ ಆಗಲಿದೆ ಎಂದು ಹೇಳಲಿ. ಅಂತಿಮವಾಗಿ ಯಾರು ಪಂಚರ್ ಆಗಲಿದ್ದಾರೆ ಎಂದು ಮತದಾರರು ತೀರ್ಮಾನ ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.

ಪರ ವಿರೋಧ ಚರ್ಚೆಗೆ ಗ್ರಾಸವಾದ ಮೋಹನ್ ಭಾಗವತ್‍ರ ಹೇಳಿಕೆ

ಇತ್ತೀಚೆಗೆ ಬಿಜೆಪಿ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದೆ. ನಾವು ಈ ಯೋಜನೆಗೆ ಹಣ ನೀಡಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬಹುದಾಗಿತ್ತು. ಮೇಕೆದಾಟು ಯೋಜನೆಗೆ ಅನುಮತಿ ನೀಡಬಹುದಿತ್ತು. ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಾನು ನಿನ್ನೆ ತಾಂತ್ರಿಕ ತಂಡದ ಜತೆ ಸಭೆ ಮಾಡಿದ್ದೇನೆ. ನಾವು ರೈತರನ್ನು ರಕ್ಷಿಸುವ ಕಾರ್ಯಕ್ರಮ ಮಾಡುತ್ತೇವೆ.

KPCC, president, DK Shivakumar, Praja Dhwani, Congress,

Articles You Might Like

Share This Article