136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಭವಿಷ್ಯ ನುಡಿದ ಡಿಕೆಶಿ

Social Share

ಬೆಂಗಳೂರು,ಡಿ.15- ಪಕ್ಷದ ವತಿಯಿಂದ ನಡೆಸಿರುವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆಲ್ಲಲಿದೆ. ಹೀಗಾಗಿ ಆಪರೇಷನ್ ಕಮಲಕ್ಕೆ ಅವಕಾಶ ಇಲ್ಲ. ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪ್ರೆಸ್‍ಕ್ಲಬ್‍ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಮ್ಮ ಸಮೀಕ್ಷೆಯಲ್ಲಿ ಬಿಜೆಪಿ 67ರಲ್ಲಿ ಮಾತ್ರ ಗೆಲ್ಲಲಿದೆ ಎಂದಿದೆ. ಜೆಡಿಎಸ್ ಬಗ್ಗೆ ಮತ್ತೊಂದು ದಿನ ಮಾತನಾಡುತ್ತೇನೆ ಎಂದರು. ಕಾಂಗ್ರೆಸ್ 100 ಕ್ಷೇತ್ರಗಳಲ್ಲಿ ಒಬ್ಬ ವ್ಯಕ್ತಿಯ ಹೆಸರನ್ನು ಶಿಫಾರಸ್ಸು ಮಾಡಲಿದೆ. ಟಿಕೆಟ್‍ಗಾಗಿ ಕಾಂಗ್ರೆಸ್‍ಗೆ 1350 ಅರ್ಜಿಗಳು ಬಂದಿವೆ. ಕೆಲವು ಕ್ಷೇತ್ರಗಳಿಗೆ 10 ರಿಂದ 12 ಮಂದಿ ಅರ್ಜಿ ಹಾಕಿದ್ದಾರೆ. ಗೆಲ್ಲುವ ವಿಶ್ವಾಸ ಇರುವುದರಿಂದಲೇ ಅಷ್ಟು ಮಂದಿ ಟಿಕೆಟ್ ಬಯಸಿ ಅರ್ಜಿ ಹಾಕಿದ್ದಾರೆ ಎ ದರು.

ಸಂಕ್ರಾಂತಿ ನಂತರ ಬಿಜೆಪಿಗೆ ಹಲವು ಮಂದಿ ಸೇರುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಅವರಿಗಷ್ಟೆ ಅಲ್ಲ, ನಮಗೂ ಸಂಕ್ರಾತಿ ಬಂದಿದೆ. ಬಹಳಷ್ಟು ಮಂದಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದರು.

ಜಿ-20 ಶೃಂಗ : ಹಣಕಾಸು ಅಜೆಂಡಾಗಳಿಗೆ ಕೇಂದ್ರೀಯ ಬ್ಯಾಂಕ್‍ಗಳ ಬೆಂಬಲ

ನಮ್ಮಲ್ಲಿ ಒಗ್ಗಟ್ಟಿದೆ, ಸಿದ್ದರಾಮಯ್ಯ ಮತ್ತು ನಮ್ಮ ನಡುವೆ ಒಗ್ಗಟ್ಟಿದೆ. ಮಾಧ್ಯಮಗಳು ಕಾಂಗ್ರೆಸ್‍ನಲ್ಲಿ ಇಲ್ಲದ ಅಸಮಧಾನವನ್ನು ಹುಡುಕುತ್ತಿವೆ. ಆದರೆ ಬಿಜೆಪಿಯಲ್ಲಿರುವ ಬಣ ರಾಜಕೀಯಗಳ ಬಗ್ಗೆ ಮರೆ ಮಾಚಲಾಗುತ್ತಿದೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ ವ್ಯಕ್ತಿ ಪೂಜೆ ಇಲ್ಲ, ಪಕ್ಷ ಪೂಜೆಗೆ ಆದ್ಯತೆ ಎಂದು ಹೇಳಿದ್ದೇನೆ. ಸಿದ್ದರಾಮಯ್ಯ ಅವರ ನಾಯಕತ್ವ, ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನವನ್ನು ಒಪ್ಪಿದ್ದೇವೆ. ಇದೇ ಆಧಾರದ ಮೇಲೆ ಚುನಾವಣೆ ಎದರಿಸುತ್ತೇವೆ ಎಂದರು.

ಬಿಜೆಪಿ ಸರ್ಕಾರದ ಆಡಳಿತದ ಬಗ್ಗೆ ಜನ ಬೇಸತ್ತಿದ್ದಾರೆ. ರಸ್ತೆ ಗುಂಡಿಗಳ ವಿಷಯದಲ್ಲಿ ಹೈಕೋರ್ಟ್ ದಿನನಿತ್ಯ ಛೀಮಾರಿ ಹಾಕುತ್ತಿದೆ. ಜಿಲ್ಲಾ ಪಂಚಾಯತ್ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದ ಕಾರಣಕ್ಕೆ ದಂಡ ಹಾಕಿದೆ. ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಸೋರಗಿ ಹೋಗಿದೆ. ಕೇವಲ ಭಾವನಾತ್ಮಕ ರಾಜಕಾರಣ ಮಾಡುತ್ತಿದ್ದಾರೆ. ಕೋಮು ಗಲಭೆಗಳಿಂದಾಗಿ ಮಲೆನಾಡು ಭಾಗದಲ್ಲಿ ಬಂಡವಾಳ ಹೂಡಿಕೆಯಾಗುತ್ತಿಲ್ಲ.

ನನಗೆ ನನ್ನದೇ ಆದ ಶಕ್ತಿ ಇದೆ : ಎಚ್ಚರಿಕೆ ಸಂದೇಶ ರವಾನಿಸಿದ ಬಿಎಸ್‌ವೈ

ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ ಜನರ ಬದುಕಿನ ಮೇಲೆ ಬರೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಗೆ ಮತ ಗಳಿಕೆ ಮಾತ್ರ ಮುಖ್ಯ, ಅದಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಶೇ.40ರಷ್ಟು ಭ್ರಷ್ಟಚಾರ ನಡೆಯುತ್ತಿದೆ. ಭೂ ಕಬಳಿಕೆ ನಡೆದಿದೆ. ಎಲ್ಲಾ ರಂಗಗಳಲ್ಲೂ ಸರ್ಕಾರ ವಿಫಲವಾಗಿದೆ ಎಂದರು.

ಗಡಿ ವಿಷಯದಲ್ಲಿ ಬಿಜೆಪಿಯ ಸರ್ಕಾರಗಳು ಅಶಾಂತಿ ಮೂಡಿಸಲು ಯತ್ನಿಸುತ್ತಿವೆ. ಇವರು ಮಾಡುವುದು ಸರಿಯಿಲ್ಲ, ಅವರು ಮಾಡುತ್ತಿರುವುದು ಸರಿಯಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಮಧ್ಯ ಪ್ರವೇಶದಿಂದ ಯಾವ ಪ್ರಯೋಜನವೂ ಆಗಿಲ್ಲ ಎಂದರು.

KPCC president, DKSivakumar, Congress,

Articles You Might Like

Share This Article