ಬೆಂಗಳೂರು,ಮೇ 2– ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಾಳೆಯಿಂದ ನಾಲ್ಕು ದಿನ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಆರ್.ಪಿ.ಸಿ 310 ಮತ್ತು ಹೆಚ್.ಕೆ 74 ಹುದ್ದೆಗಳಿಗೆ ಮುಖ್ಯ ಪರೀಕ್ಷೆಗಳು ನಾಳೆ (ಮೇ 3), ಮೇ 5,ಮೇ 7 ಮತ್ತು ಮೇ 9 ರಂದು ನಗರದ ಒಟ್ಟು 9 ಉಪಕೇಂದ್ರಗಳಲ್ಲಿ ನಡೆಯಲಿದೆ.
ಈ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇ ತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಜೆರಾಕ್‌್ಸ ,ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ರವರು ಆದೇಶ ಹೊರಡಿಸಿದ್ದಾರೆ.