ನಾಳೆ ಕತ್ತಲಲ್ಲಿ ಮುಳುಗುವುದೇ ಕರ್ನಾಟಕ..?

Social Share

ಬೆಂಗಳೂರು,ಮಾ.15- ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಪಿಟಿಸಿಎಲ್ ನೌಕರರು ಸಾಮೂಹಿಕ ರಜೆ ಹಾಕಿ ಮುಷ್ಕರ ನಡೆಸಲು ತೀರ್ಮಾನಿಸಿರುವುದರಿಂದ ನಾಳೆ ಇಡಿ ರಾಜ್ಯ ಕತ್ತಲಲ್ಲಿ ಮುಳುಗುವ ಸಾಧ್ಯತೆಗಳಿವೆ. ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವುದರಿಂದ ನಾಳೆಯಿಂದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ರೂ ಸರ್ಕಾರ ಸ್ಪಂದಿಸದ ಕಾರಣ ಮುಷ್ಕರದ ನಿರ್ಧಾರ ಕೈಗೊಳ್ಳಲಾಗಿದೆ.
ಕಳೆದ 14 ದಿನದ ಹಿಂದೆಯೇ ಮುಷ್ಕರದ ನೋಟೀಸ್ ಕೊಟ್ಟಿದ್ದ ನೌಕರರ ಸಂಘ ಹಮ್ಮಿಕೊಂಡಿರುವ ಮುಷ್ಕರಕ್ಕೆ ಮಾಜಿ ನೌಕರರು ಬೆಂಬಲ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಮುಖ್ಯ ಶಿಕ್ಷಕ ಬಂಧನ

ಕೆಪಿಟಿಸಿಎಲ್ ನೌಕರರಿಗೆ ಶೇ.25ರಷ್ಟು ವೇತನ ಪರಿಷ್ಕರಣೆ ಮಾಡುವಂತೆ ನೌಕರರು ಒತ್ತಾಯಿಸುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಇದುವರೆಗೂ ಯಾವುದೇ ಮಾತುಕತೆ ನಡೆಸಲು ಮುಂದಾಗದಿರುವುದು ನೌಕರರ ಆಕ್ರೋಶಕ್ಕೆ ಕಾರಣವಾಗಿದೆ.

ತಿಂಗಳುಗಟ್ಟಲೆ ತಾಯಿಯ ಶವ ಬಚ್ಚಿಟ್ಟಿದ್ದ ಮಗಳು

ಮುಷ್ಕರ ನಡೆಸಲು ತೀರ್ಮಾನಿಸಿರುವ ನೌಕರರೊಂದಿಗೆ ಇಂದು ಇಂಧನ ಸಚಿವ ಸುನಿಲ್‍ಕುಮಾರ್ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ಒಂದು ವೇಳೆ ಮಾತುಕತೆ ವಿಫಲವಾದರೆ ಮುಷ್ಕರ ಗ್ಯಾರಂಟಿ ಎನ್ನುತ್ತಿದ್ದಾರೆ ನೌಕರರು.
ನೌಕರರು ಮುಷ್ಕರ ಮಾಡಿದ್ರೆ ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಸಂಪೂರ್ಣ ವ್ಯತ್ಯಯವಾಗುವ ಸಾಧ್ಯತೆಗಳಿವೆ.

KPTCL, employees, strike, tomorrow,

Articles You Might Like

Share This Article