ಬೆಂಗಳೂರು, ಜೂ. 4– ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಟೂರ್ನಿ ಗೆಲ್ಲುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸ್ಪಿನ್ ಅಲ್ ರೌಂಡರ್ ಕೃನಾಲ್ ಪಾಂಡ್ಯಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ನೂತನ ದಾಖಲೆ ಬರೆದಿದ್ದಾರೆ.
ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ನ ಎರಡು ಫೈನಲ್ ಗಳಲ್ಲಿ ಉತ್ತಮ ಉತ್ತಮ ಪ್ರದರ್ಶನಕ್ಕಾಗಿ ಎರಡು ಬಾರಿ ವ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮೊದಲ ಆಟಗಾರ ಎಂಬ ಮೈಲುಗಲ್ಲು ನಿರ್ಮಿಸಿದ್ದಾರೆ.
2017ರಲ್ಲಿ ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡವು, ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಾರಥ್ಯದ ರೈಸಿಂಗ್ ಪುಣೆ ಜಯಂಟ್ಸ್ ಅನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಕೃನಾಲ್ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದರು.
ಅಂದಿನ ಪಂದ್ಯದಲ್ಲಿ ತಮ ಬ್ಯಾಟಿಂಗ್ ವೈಭವ ಮೆರೆದಿದ್ದ ಕೃನಾಲ್ 38 ಎಸೆತಗಳಲ್ಲಿ 47 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದರೆ, ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಬ್ಯಾಟಿಂಗ್ ಗಿಂತ ಬೌಲಿಂಗ್ ನಲ್ಲಿ ಹೆಚ್ಚು ಮಿಂಚು ಹರಿಸಿದ್ದ ಕೃನಾಲ್ ಪಾಂಡ್ಯ ಟೂರ್ನಿಯಲ್ಲಿ ಒಟ್ಟಾರೆ ಮೂರು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಫೈನಲ್ ಪಂದ್ಯದಲ್ಲೂ ಆರ್ ಸಿಬಿ ತಂಡದ ಬೌಲಿಂಗ್ ಬಲ ಹೆಚ್ಚಿಸಿದ್ದ ಕೃನಾಲ್ ಪಾಂಡ್ಯ 4 ಓವರ್ ಗಳಲ್ಲಿ 17 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆಯುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ಅಭಿಮಾನಿಗಳ ಮನಗೆದ್ದಿದ್ದಾರೆ.