ಈಶ್ವರಪ್ಪ ವಜಾಗೊಳಿಸಿದರೆ ಸಿಎಂಗೆ ಗೌರವ ಉಳಿಯುತ್ತದೆ : ಡಿಕೆಶಿ

Social Share

ಬೆಂಗಳೂರು, ಫೆ.23- ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಚಿವ ಈಶ್ವರಪ್ಪ ಅವರನ್ನು ಈಗಲಾದರೂ ವಜಾಗೊಳಿಸಿದರೆ ಮುಖ್ಯಮಂತ್ರಿಗಳಿಗೆ ಗೌರವ ಉಳಿಯುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ತಮ್ಮ ನಿವಾಸದಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಿ. ಅವರ ವಿರ್ದು ದೇಶದ್ರೋಹದಡಿ ಪ್ರಕರಣ ದಾಖಲಿಸಿ ಎಂದು ಒತ್ತಾಯಿಸುತ್ತಲೇ ಬಂದಿದೆ.
ನಮ್ಮ ಬೇಡಿಕೆಗೆ ಅನುಗುಣವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಕೂಡ ಮಾತನಾಡಿ ದ್ದಾರೆ. ಸಚಿವರ ಈಶ್ವರಪ್ಪ ಅವರ ಹೇಳಿಕೆ ತಪ್ಪು ಎಂದಿದ್ದಾರೆ. ಬಿಜೆಪಿಯವರಿಗೆ ತಡವಾಗಿಯಾದರೂ ಅರಿವಾಗಿರುವುದು ಸಂತೋಷದ ವಿಷಯ. ಮುಖ್ಯಮಂತ್ರಿ ಮತ್ತು ಸಂಪುಟದ ಸಚಿವರು, ಕೆಲ ಹಿರಿಯ ನಾಯಕರು ಈಶ್ವರಪ್ಪ ಅವರನ್ನು ಸಮರ್ಥಿಸಿಕೊಳ್ಳದೇ ಸಂಪುಟದಿಂದ ಕೈಬಿಟ್ಟರೆ ಕನಿಷ್ಠ ಗೌರವ ವಾದರೂ ಉಳಿಯುತ್ತದೆ ಎಂದರು.
ನಿನ್ನೆ ಕಾಂಗ್ರೆಸ್ ನಿಯೋಗ ರಾಜ್ಯಪಾಲ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಪರಿಶೀಲಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ಹೇಳಿದರು.
ಸಂವಿಧಾನದ ಉಳವಿಗೆ ವಿಧಾನ ಮಂಡಲದಲ್ಲಿ ಅಹೋರಾತ್ರಿ ಹೋರಾಟ ನಡೆಸಿದಕ್ಕಾಗಿ ದಲಿತ ಸಂಘಟನೆಗಳ ಮುಖಂಡರು ಇಂದು ತಮ್ಮನ್ನು ಅಭಿನಂದಿಸಿ ದ್ದಾರೆ. ಯಾವುದೇ ಸ್ವಾರ್ಥ ಇಲ್ಲದೆ ಸಂವಿಧಾನದ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ಸಂಘಟನೆಗಳು ಅಭಿನಂದನೆಗೆ ಅರ್ಹರು ಎಂದು ತಿಳಿಸಿದರು.
ಫೆ.27ರಂದು ರಾಮನಗರದಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡಿ ಕಾಂಗ್ರೆಸ್‍ನ ಪಾದಯಾತ್ರೆಯನ್ನು ಪುನರಾ ರಂಭಿಸಲಾಗುವುದು. ಈ ಮೊದಲು ಕೆಲವು ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲು ನಿಬಂಧನೆಗಳನ್ನು ವಿಸಲಾಗಿತ್ತು. ಆದರೆ ಈ ಬಾರಿ ಆ ನಿಬಂಧನೆಗಳು ಇಲ್ಲ. ಯಾರು ಬೇಕಾದರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದರು.
ಕಾಂಗ್ರೆಸಿಗರಿಗೆ ನೀರಿನ ಹಂಚಿಕೆ ಬಗ್ಗೆ ಮಾಹಿತಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು ಅವರ ಬಳಿ ತರಬೇತಿ ಪಡೆದುಕೊಳ್ಳುತ್ತೇನೆ. ಅವರ ಬೋಧನೆಗಳನ್ನು
ಅನುಸರಿಸುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು.

Articles You Might Like

Share This Article