KSDL ಹಗರಣದಿಂದ ಮುಜುಗರ : ಅಮಿತ್ ಶಾ ದಾವಣಗೆರೆ ಭೇಟಿ ರದ್ದು

Social Share

ಬೆಂಗಳೂರು,ಮಾ.6- ಟೆಂಡರ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪ್ರಕರಣದಿಂದ ಮುಜುಗರಕ್ಕೆ ಸಿಲುಕಿರುವ ಬಿಜೆಪಿ ಅಮಿತ್ ಶಾ ಅವರ ಕರ್ನಾಟಕ ಭೇಟಿಯನ್ನು ಮುಂದೂಡಲಾಗಿದೆ.

ಕೇಂದ್ರ ಗೃಹಸಚಿವ ರಾಗಿರುವ ಅಮಿತ್ ಶಾ ಇದೇ ತಿಂಗಳ 12ರಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿಗೆ ಆಗಮಿಸುವ ಕಾರ್ಯ ಕ್ರಮ ನಿಗದಿಯಾಗಿತ್ತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯ ದರ್ಶಿ ಯಾಗಿ ರುವ ಎಂ.ಪಿ.ರೇಣುಕಾ ಚಾರ್ಯ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಅಮಿತ್ ಷಾ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು.

ಕೋಲ್ಕತ್ತಾದಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ

ಸುಮಾರು ಒಂದು ಲಕ್ಷ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ತಯಾರಿ ನಡೆಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಪ್ರಮುಖರಿಗೆ ಆಹ್ವಾನವನ್ನೂ ಸಹ ನೀಡಲಾಗಿತ್ತು.

ಆದರೆ ಟೆಂಡರ್ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಹಾಗೂ ಬಿಡಬ್ಲ್ಯುಎಸ್‍ಎಸ್‍ಬಿ ಮುಖ್ಯ ಲೆಕ್ಕ ಪರಿಶೋಧಕ ಪ್ರಶಾಂತ್ ಮಾಡಾಳ್ ಹಾಗೂ ಇತರೆ ಆರೋಪಿಗಳು ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾದರು.

ಇದೀಗ ಸ್ವತಃ ಮಾಡಾಳ್ ಅವರೇ ಬಂಧನದ ಭೀತಿ ಎದುರಿಸುತ್ತಿದ್ದು ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರನ್ನು ಬಂಧಿಸಲು ಲೋಕಾಯುಕ್ತ ಅಧಿಕಾರಿಗಳು ವಿಶೇಷ ತಂಡವನ್ನು ಸಹ ರಚಿಸಿದ್ದಾರೆ. ಮಾ.12ರಂದು ಅಮಿತ್ ಷಾ ಬರುವ ವೇಳೆಗೆ ಮಾಡಾಳ್ ಲೋಕಾಯುಕ್ತ ಪೊಲೀಸರ ಬಂಧಿಸಿದರೆ ಅದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ.

ದೇಶದ ಹೆಮ್ಮೆ INS ವಿಕ್ರಾಂತ್‍ನಲ್ಲಿ ನೌಕಾಪಡೆ ಕಮಾಂಡರ್‌ಗಳ ಸಭೆ

ಹೊನ್ನಾಳಿಯು ಚನ್ನಗಿರಿ ಕ್ಷೇತ್ರಕ್ಕೆ ಹೊಂದಿಕೊಂಡಿರುವುದರಿಂದ ಮಾಡಾಳ್ ಬಂಧನ ಸಹಜವಾಗಿ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿ ಅಮಿತ್ ಷಾ ಅವರಿಗೆ ಮುಜುಗರವಾಗಲಿದೆ. ಇದೆಲ್ಲವನ್ನೂ ಲೆಕ್ಕಾಚಾರ ಹಾಕಿಯೇ ಹೊನ್ನಾಳಿಯ ಕಾರ್ಯಕ್ರಮವನ್ನು ಸದ್ಯಕ್ಕೆ ಮುಂದೂಡಲಾಗಿದೆ.

ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಈ ಅಮಿತ್ ಶಾ ಅವರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಂಡಗಳು, ಕುರುಬರಹಟ್ಟಿ, ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ 12 ಜಿಲ್ಲೆಗಳ ಸುಮಾರು 53 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕಿತ್ತು.

ಕೇಂದ್ರ ಸಚಿವರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಶಾಸಕ ರೇಣುಕಾಚಾರ್ಯ ಸೇರಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳು ಸಮಾರಂಭದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.
ಇದೀಗ ಮಾಡಾಳ ವಿರುಪಾಕ್ಷಪ್ಪ ಪ್ರಕರಣದಿಂದ ಏಕಾಏಕಿ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.

KSDL, scam, Amit Shah, Davangere, program, cancelled,

Articles You Might Like

Share This Article