ಕೆಎಸ್‍ಡಿಎಲ್ ಟೆಂಡರ್ ಹಗರಣ : ತನಿಖಾಕಾಧಿರಿಗಳ ಬದಲಾವಣೆ

Social Share

ಬೆಂಗಳೂರು,ಮಾ.7- ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣವನ್ನು ಬೇಧಿಸಿದ್ದ ಲೋಕಾಯುಕ್ತ ಸಂಸ್ಥೆಯ ಇಬ್ಬರು ತನಿಖಾಕಾಧಿರಿಗಳನ್ನು ಏಕಾಏಕಿ ಬದಲಾಯಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಲೋಕಾಯುಕ್ತ ಡಿವೈಎಸ್ಪಿ ಪ್ರಮೋದ್ ಕುಮಾರ್ ಹಾಗೂ ಇನ್‍ಸ್ಪೆಕ್ಟರ್ ಕುಮಾರಸ್ವಾಮಿ ಅವರುಗಳನ್ನು ದಿಢೀರನೆ ವರ್ಗಾವಣೆ ಮಾಡಿ ಬೇರೊಬ್ಬರಿಗೆ ತನಿಖೆಯ ನೇತೃತ್ವ ವಹಿಸಿರುವುದು ಗುಮಾನಿಗೆ ಎಡೆ ಮಾಡಿಕೊಟ್ಟಿದೆ.

40ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಗೂ ಮನೆಯಲ್ಲಿ 8ಕೋಟಿ ರೂ. ಅಧಿಕ ಹಣ ಸಿಕ್ಕಿದ್ದರ ಕುರಿತು ಲೋಕಾಯುಕ್ತ ತನಿಖೆ ಚುರುಕುಗೊಂಡಿದೆ. ಆದರೆ ಇದರ ಮಧ್ಯೆ ಪ್ರಕರಣದ ತನಿಖಾಕಾಧಿರಿಗಳಾಗಿದ್ದ ಪ್ರಮೋದ್‍ಕುಮಾರ್, ಇನ್ಸ್‍ಪೆಕ್ಟರ್ ಕುಮಾರಸ್ವಾಮಿಯವರನ್ನು ಬದಲಾವಣೆ ಮಾಡಲಾಗಿದೆ.

ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದ ಹುಚ್ಚು ಪ್ರೇಮಿ

ಇವರ ಬದಲಿಗೆ ಡಿವೈಎಸ್ಪಿ ಆಂಥೋನಿ ಜಾನ್, ಇನ್ಸ್‍ಪೆಕ್ಟರ್ ಬಾಲಾಜಿ ಬಾಬು ಅವರನ್ನು ನೇಮಕ ಮಾಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿ ಬದಲಾವಣೆ ಸಾಕಷ್ಟು ಅನುಮಾನ ಮೂಡಿಸಿದೆ.

ಶಾಸಕನ ಪುತ್ರ ಮಾಡಾಳ್ ಪ್ರಶಾಂತ್ ಈಗಾಗಲೇ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಆದರೆ ಎ1 ಆರೋಪಿ ಶಾಸಕ ವಿರೂಪಾಕ್ಷಪ್ಪ ಮಾತ್ರ ಇನ್ನೂ ಭೂಗತರಾಗಿದ್ದಾರೆ. ಮಾಡಾಳ್ ಬಂಧನಕ್ಕೆ ಪೊಲೀಸರು ಬಲೆ ಬೀಧಿಸಿದ್ದು ಎಲ್ಲಿದ್ದಾರೆ ಎನ್ನುವ ಸುಳಿವೇ ಸಿಗುತ್ತಿಲ್ಲ.

ಶಾಸಕ ನಾಪತ್ತೆಯಾಗಿ 6 ದಿನ ಕಳೆದಿದೆ ಆದರೂ ಪೊಲೀಸರ ಕೈಗೆ ಸಿಗುತ್ತಿಲ್ಲ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಾಡಾಳ್ ಮಾತ್ರ ನೋಟಿಸ್‍ಗೆ ಕೇರ್ ಮಾಡುತ್ತಿಲ್ಲ. ವಿಚಾರಣೆಗೂ ಹಾಜರಾಗಿಲ್ಲ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್, ಜಾಮೀನು ಮಂಜೂರು

ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚಾವತಾರದಲ್ಲಿ ಎ1 ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪಗೆ ದಿನಗಳು ಉರುಳಿದಂತೆ ಬಂಧನ ಭೀತಿ ಎದರಾಗಿದೆ.

ಲೋಕಾ ಬಂಧನದಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿರುವ ಮಾಡಾಳ್, ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ವಕೀಲರ ಮೂಲಕ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಇಂದು(ಮಾ.07) ಮಾಡಾಳ್ ನಿರೀಕ್ಷಣಾ ಅರ್ಜಿ ವಿಚಾರಣೆ ನಡೆಯಲಿದೆ.

ಪುತ್ರನ ಲಂಚ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕೆಎಸ್‍ಡಿಎಲ್‍ನ ಮಾಜಿ ಚೇರ್ಮನ್ , ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಕಳೆದ ಆರು ದಿನಗಳಿಂದ ಕೈಗೆ ಸಿಗದೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ.

ಮಾಡಾಳ್ ಮಿಸ್ಸಿಂಗ್ : ಹುಡುಕಿಕೊಡುವಂತೆ ಕಾಂಗ್ರೆಸ್ ಪೋಸ್ಟರ್ ಪಾಲಿಟಿಕ್ಸ್

ಈ ಹಿನ್ನೆಲೆಯಲ್ಲಿ ವಿರೂಪಾಕ್ಷಪ್ಪ ಬಂಧನಕ್ಕೆ ಲೋಕಾಯುಕ್ತ ಮೂರು ವಿಶೇಷ ತಂಡಗಳನ್ನು ರಚಿಸಿದೆ. ಇನ್ನು ಈ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಕಾಧಿರಿಗಳ ಬದಲಾವಣೆಯಾಗಿದೆ. ಕೇವಲ 4 ದಿನಕ್ಕೆ ಪ್ರಕರಣದ ಇಬ್ಬರು ತನಿಖಾಕಾಧಿರಿಗಳನ್ನು ಬದಲಾವಣೆ ಮಾಡಲಾಗಿದ್ದು, ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Articles You Might Like

Share This Article