Friday, May 3, 2024
Homeರಾಜ್ಯನಾಳೆ ಕೆ-ಸೆಟ್ ಪರೀಕ್ಷೆ, ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ

ನಾಳೆ ಕೆ-ಸೆಟ್ ಪರೀಕ್ಷೆ, ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ

ಬೆಂಗಳೂರು, ಜ.12- ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಾಳೆ ನಡೆಯಲಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿವಿಧ 41 ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 1,17,302 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ನಗರ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮ ಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10ರಿಂದ 11 ಗಂಟೆವರೆಗೆ ಎಲ್ಲ ವಿಷಯಗಳ ಅಭ್ಯರ್ಥಿಗಳಿಗೆ ಸಾಮಾನ್ಯ ಪರೀಕ್ಷೆ (ಪೇಪರ್-1) ಇರುತ್ತದೆ. ನಂತರ ಅದೇ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪರೀಕ್ಷೆ (ಪೇಪರ್-2) ನಡೆಯಲಿದೆ. ಅದು ಮಧ್ಯಾಹ್ನ 12ರಿಂದ 2.00ರವರೆಗೆ ಇರುತ್ತದೆ. ಒಮ್ಮೆ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗಳು ಪ್ರವೇಶಿಸಿದ ಮೇಲೆ ಎರಡೂ ಪತ್ರಿಕೆಗಳ ಪರೀಕ್ಷೆ ಮುಗಿದ ನಂತರವೇ ಹೊರಹೋಗಲು ಅವಕಾಶ ನೀಡಲಾಗುವುದು. ಕಟ್ಟುನಿಟ್ಟಿನ ತಪಾಸಣೆ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮೊದಲೇ ಬರಬೇಕು ಎಂದು ಅವರು ಸೂಚಿಸಿದ್ದಾರೆ.

ರೊಚ್ಚಿಗೆದ್ದ ಅಮೆರಿಕ-ಬ್ರಿಟನ್, ಹೌತಿ ಬಂಡುಕೋರರ ಮೇಲೆ ಏರ್ ಸ್ಟ್ರೈಕ್

ಪರೀಕ್ಷೆ ನಡೆಯುವ 41 ವಿಷಯಗಳಲ್ಲಿ ವಾಣಿಜ್ಯ ಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ವು ಅಂದರೆ 16,000 ಮಂದಿ ತೆಗೆದುಕೊಂಡಿದ್ದಾರೆ. ಕನ್ನಡ ವಿಷಯವನ್ನು 11 ಸಾವಿರ ಮಂದಿ ತೆಗೆದುಕೊಂಡಿದ್ದಾರೆ. ಅತಿ ಕಡಿಮೆ ಅಂದರೆ 25 ಮಂದಿ ಅಭ್ಯರ್ಥಿಗಳು ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷೆ ಬರೆಯುವ ಒಟ್ಟು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕ ಪಡೆದ ಶೇ. 6ರಷ್ಟು ಮಂದಿ ಅಂತಿಮವಾಗಿ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲಿದ್ದಾರೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಅವರು ಹೇಳಿದ್ಧಾರೆ.

800 ಇ- ಮೇಲ್: ನೋಂದಣಿ ಸಂಖ್ಯೆ ಕಳೆದುಕೊಂಡ 800ಕ್ಕೂ ಹೆಚ್ಚು ಮಂದಿ ಕೆ-ಸೆಟ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳದ ಕಾರಣ ಅವರ ಇ-ಮೇಲ್‍ಗಳಿಗೆ ನೋಂದಣಿ ಸಂಖ್ಯೆ ರವಾನಿಸುವ ಕೆಲಸವನ್ನು ಕೆಇಎ ಮಾಡಿದ್ದು ಎಲ್ಲರೂ ಪರೀಕ್ಷೆ ತೆಗೆದುಕೊಳ್ಳಲು ಇದು ನೆರವಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

Latest News